Breaking News

ಇಂದಿನಿಂದ ರಾಜ್ಯದಲ್ಲಿ 9 ದಿನ ‘ಬಿಜೆಪಿ ಸಂಕಲ್ಪ ಅಭಿಯಾನ’ : ವಿಜಯಪುರದಲ್ಲಿ ಜೆ.ಪಿ ನಡ್ಡಾ ಚಾಲನೆ

Spread the love

ಬೆಂಗಳೂರು: ಇಂದಿನಿಂದ (ಜ.21) ಜ. 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಅಭಿಯಾನ ನಡೆಯಲಿದ್ದು, ಇತ್ತೀಚೆಗಷ್ಟೇ ಕೊಪ್ಪಳಕ್ಕೆ ಆಗಮಿಸಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ಜ.21 ಇಂದು ಮತ್ತೆ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ.

 

ವಿಜಯನಗರದಲ್ಲಿ ಬಿಜೆಪಿಯ ಬೂತ್ ವಿಜಯ ಸಂಕಲ್ಪ ಅಭಿಯಾನಕ್ಕೆ ಶನಿವಾರ ಜೆ.ಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಶನಿವಾರ ಬೆಳಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯಿಂದ ಕಲಬುರಗಿಗೆ ಆಗಮಿಸುವ ಜೆ.ಪಿ ನಡ್ಡಾ, ಬಳಿಕ ವಿಜಯಪುರದಲ್ಲಿ ಜ್ಞಾನಯೋಗಾಶ್ರಮಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಸಿದ್ಧೇಶ್ವರ ಮಹಾಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ ನಾಗಠಾಣ ವಿಧಾನಸಭಾ ಕ್ಷೇತ್ರದಲ್ಲಿ ವಿಜಯ ಸಂಕಲ್ಪ ಅಭಿಯಾನವನ್ನು ಜೆ.ಪಿ ನಡ್ಡಾ ಉದ್ಘಾಟಿಸಲಿದ್ದಾರೆ. ಭಾಗವಹಿಸಲಿದ್ದಾರೆ.

ಜ.21ರಿಂದ 29ರವರೆಗೆ ಬಿಜೆಪಿಯ ವಿಜಯ ಸಂಕಲ್ಪ ಅಭಿಯಾನ ನಡೆಯಲಿದ್ದು, .ಜ.21 ರಂದು ಅಭಿಯಾನಕ್ಕೆ ಬಿಜೆಪಿ ಅಧ್ಯಕ್ಷ ನಡ್ಡಾ ಚಾಲನೆ ನೀಡಲಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಕ್ಷೇತ್ರದಲ್ಲಿ ಚಾಲನೆ ನೀಡಲಿದ್ದಾರೆ. 58 ಸಾವಿರ ಬೂತ್ಗಳಲ್ಲಿ ಏಕಕಾಲದಲ್ಲಿ ಅಭಿಯಾನ ನಡೆಯಲಿದೆ. ಅಭಿಯಾನ ವೇಳೆ ಸರ್ಕಾರದ ಯೋಜನೆಗಳನ್ನು ತಿಳಿಸಲಾಗುವುದು ಎಂದು ಬೆಂಗಳೂರಿನಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ