Breaking News

ಆಸ್ಪತ್ರೆ ನಿರ್ಮಾಣಕ್ಕೆ ₹27 ಕೋಟಿ ಬಿಡುಗಡೆ:ಶಾಸಕ ಅನಿಲ ಬೆನಕೆ

Spread the love

ಬೆಳಗಾವಿ: ನಗರದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇನ್ಫ್ರಾಸ್ಟ್ರಕ್ಚರ್ ಮಿಷನ್ ಅಡಿಯಲ್ಲಿ ₹27 ಕೋಟಿ ಅನುದಾನ ನೀಡಲಾಗಿದೆ. ಶಾಸಕ ಅನಿಲ ಬೆನಕೆ ಪ್ರಯತ್ನ ಮಾಡಿ ಈ ಅನುದಾನ ಮಂಜೂರು ಮಾಡಿಸಿದ್ದಾರೆ ಎಂದು ಬಿಜೆಪಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 

ಜಿಲ್ಲಾಸ್ಪತ್ರೆ ಅಭಿವೃದ್ಧಿ, ಮಲ್ಟಿ ಸೂಪರ್ ಸ್ಪೆಷಾಲಟಿ ಆಸ್ಪತ್ರೆ ನಿರ್ಮಾಣ ಸೇರಿದಂತೆ ಆರೋಗ್ಯ ಕ್ಷೇತ್ರದಲ್ಲಿ ವಿಶೇಷ ಒತ್ತು ನೀಡಿರುವ ಶಾಸಕ ಅನಿಲ ಬೆನಕೆ, ಬೆಳಗಾವಿಯಲ್ಲಿ ನಡೆದ ಅಧಿವೇಶನ ಸಂದರ್ಭದಲ್ಲಿ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಹಾಗೂ ವಿವಿಧ ಸಚಿವರಿಗೆ ಮನವಿ ಸಲ್ಲಿಸಿದ್ದರು. ಅದರ ಫಲವಾಗಿ ಕೇಂದ್ರದಿಂದ ಕ್ರಿಟಿಕಲ್ ಕೇರ್ ಆಸ್ಪತ್ರೆ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಆಗಿದೆ ಎಂದು ತಿಳಿಸಲಾಗಿದೆ.

ಅನುದಾನ ಬಿಡುಗಡೆ ಆಗಿದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಆರೋಗ್ಯ ಸಚಿವರು ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರ ಸಹಕಾರಕ್ಕೆ ಶಾಸಕ ಅನಿಲ ಬೆನಕೆ ಧನ್ಯವಾದ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ