ಕೋಲಾರ: ಕೋಲಾರದಲ್ಲೇ ಸ್ಪರ್ಧೆ ಮಾಡುವುದಾಗಿ ಘೋಷಿಸಿರುವ ಸಿದ್ದರಾಮಯ್ಯ ಅವರತ್ತ ಕ್ಷೇತ್ರದಲ್ಲಿ ನಿತ್ಯ ‘ವಿವಿಧಾಸ್ತ್ರ’ ಪ್ರಯೋಗ ನಡೆಯುತ್ತಿದ್ದು, ಇಡೀ ರಾಜ್ಯದ ಚಿತ್ತವೆಲ್ಲಾ ಈ ಕ್ಷೇತ್ರದತ್ತ ನೆಟ್ಟಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಜೆಡಿಎಸ್ ರಾಜ್ಯ ಅಧ್ಯಕ್ಷ ಸಿ.ಎಂ.ಇಬ್ರಾಹಿಂ ಸೇರಿದಂತೆ ಪ್ರಮುಖ ನಾಯಕರು ಕೋಲಾರಕ್ಕೆ ಭೇಟಿ ನೀಡುತ್ತಾ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರನ್ನು ಕಟ್ಟಿ ಹಾಕಲು ‘ಚಕ್ರವ್ಯೂಹ’ ರಚಿಸಿಸುತ್ತಿದ್ದಾರೆ.
ತಂತ್ರ, ಪ್ರತಿತಂತ್ರದಿಂದಾಗಿ ಚುನಾವಣೆ ಘೋಷಣೆಗೆ ಮುನ್ನವೇ ಕೋಲಾರದ ಅಖಾಡ ರಂಗೇರಿದೆ.
ಕುರುಬ ಸಂಘದಲ್ಲಿ ಭಿನ್ನಾಭಿಪ್ರಾಯ:
ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡುವ ವಿಚಾರವಾಗಿ ಜಿಲ್ಲಾ ಕುರುಬರ ಸಂಘದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದೆ. ಸಂಘದ ಪದಾಧಿಕಾರಿಗಳ ನಡುವೆಯೇ ಮಾತಿನ ಚಕಮಕಿ ನಡೆಯುತ್ತಿದೆ. ಸಂಘದ ಅಧ್ಯಕ್ಷ ತಂಬಹಳ್ಳಿ ಮುನಿಯಪ್ಪ ಬಿಜೆಪಿ ಟಿಕೆಟ್ ಆಕಾಂಕ್ಷಿ ವರ್ತೂರು ಪ್ರಕಾಶ್ ಅವರನ್ನು ಬೆಂಬಲಿಸಿದರೆ, ಕಾರ್ಯಾಧ್ಯಕ್ಷ ಜೆ.ಕೆ.ಜಯರಾಂ ಕಾಂಗ್ರೆಸ್‌ಗೂ, ಮಾಜಿ ನಿರ್ದೇಶಕ ಕೆ.ಟಿ.ಅಶೋಕ್ ಜೆಡಿಎಸ್‌ಗೂ ಬಹಿರಂಗವಾಗಿ ಬೆಂಬಲ ಘೋಷಿಸಿದ್ದಾರೆ.