Breaking News

ವಿಜಯಪುರ: ಯುವತಿಯ ಅತ್ಯಾಚಾರ ಪ್ರಕರಣ. ಪೊಲೀಸರಿಂದ ಮೂವರ ಬಂಧನ

Spread the love

ವಿಜಯಪುರ: ನಗರದ ಸ್ಯಾಟ್‍ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಲ್ಲಿ ಪೊಲೀಸರು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರನ್ನು ಅಯಾಜ ಅಹಮದ್ ಜಮಾದಾರ, ಉಮರ ಫಾರೂಕ ಹಾಗೂ ರಾಹಿಲ್ ಬಂಧಿತ ಆರೋಪಿಗಳು ಎಂದು ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.

 

ಜ.17 ರಂದು ರಾತ್ರಿ ವೇಳೆ ನಗರದ ಸ್ಯಾಟ್‍ಲೈಟ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ಮಾನಸಿಕ ಅಸ್ವಸ್ತೆಯಿಂದ ಬಳಸುತ್ತಿದ್ದ ಯುವತಿಯನ್ನು ಪುಸಲಾಯಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದರು. ಈ ಕುರಿತು ಆರೋಪಿಗಳ ವಿರುದ್ಧ ದೂರು ದಾಖಲಾಗಿತ್ತು.

ಘಟನೆ ಬಳಿಕ ಯುವತಿ ಬಳಿಕೆಯಿಂದ ನಿರ್ಜನ ಪ್ರದೇಶದಲ್ಲಿ ನರಳುತ್ತಿರುವುದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ಸಂತ್ರಸ್ತ ಯುವತಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದರು.

ಮತ್ತೊಂದೆಡೆ ಘಟನೆಯ ಬಳಿಕ ತಲೆ ಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದರು. ಘಟನಾ ಸ್ಥಳದಲ್ಲಿ ಕಂಡುಬಂದ ಮೊಬೈಲ್ ಸಂಪರ್ಕಗಳು, ಬಸ್ ನಿಲ್ದಾಣದಲ್ಲಿ ಯುವತಿಯನ್ನು ಪುಸಲಾಯಿಸಿ ಕೊರೆದೊಯ್ದ ಸಿಸಿ ಕೆಮೆರಾದ ತುಣುಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸುವಲ್ಲಿ ನಮ್ಮ ಪೊಲೀಸರು ಯಶಸ್ವಿಯಗಿದ್ದಾರೆ ಎಂದು ಎಸ್ಪಿ ಆನಂದಕುಮಾರ ವಿವರಿಸಿದರು.


Spread the love

About Laxminews 24x7

Check Also

ಸಂಸ್ಕೃತ ಶಾಲಾ ಶಿಕ್ಷಕನಿಂದ 9 ವರ್ಷದ ವಿದ್ಯಾರ್ಥಿ ಮೇಲೆ ಅಮಾನುಷ ಹಲ್ಲೆ ಆರೋಪ: ವಿಡಿಯೋ ವೈರಲ್, ಶಿಕ್ಷಕ ಪರಾರಿ, ಪೊಲೀಸರಿಂದ ತಲಾಶ್​

Spread the loveಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಸಂಸ್ಕೃತ ವೇದ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿಯ ಮೇಲೆ ಅಮಾನುಷವಾಗಿ ಹಲ್ಲೆ ನಡೆಸುತ್ತಿರುವ ಆಘಾತಕಾರಿ ಪ್ರಕರಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ