Breaking News

ಖಾನಾಪುರ: ವೃದ್ಧೆಗೆ ನ್ಯುಮೋನಿಯಾ- ಜಿಲ್ಲಾಸ್ಪತ್ರೆಗೆ ದಾಖಲು

Spread the love

ಖಾನಾಪುರ  ತಾಲ್ಲೂಕಿನ ನಾವಗಾ ಹೊರವಲಯದ ಅರಣ್ಯದಲ್ಲಿ ಸೋಮವಾರ ಪತ್ತೆಯಾದ 90 ವರ್ಷದ ವೃದ್ಧೆ ನ್ಯುಮೋನಿಯಾದಿಂದ ಬಳಲುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ.

‘ತೀವ್ರ ನಿತ್ರಾಣಗೊಂಡ ಅಜ್ಜಿ ಸರಿಯಾಗಿ ಮಾತನಾಡುವಷ್ಟು ಚೇತರಿಸಿಕೊಂಡಿಲ್ಲ. ತನ್ನ ಹೆಸರು ಅಂಬವ್ವ ಕಾಟಗಾರಿ, ಊರಿನ ಹೆಸರು ಉಗರಖೋಡ ಎಂದಷ್ಟೇ ಹೇಳಿದ್ದಾರೆ. ಅವರ ಗುರುತು ಪತ್ತೆಗೆ ಯತ್ನ ನಡೆದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ನಾಲ್ಕೈದು ದಿನಗಳಿಂದ ಅನ್ನ-ನೀರು ಸೇವಿಸದೇ ಚಳಿಯಲ್ಲಿ ಬಿದ್ದಿದ್ದರಿಂದ ಅಜ್ಜಿ ದೇಹ ಕ್ಷೀಣಿಸಿದೆ. ನ್ಯುಮೋನಿಯಾ ಅಂಟಿಕೊಂಡ ಕಾರಣ ಹೆಚ್ಚಿನ ಚಿಕಿತ್ಸೆಗೆ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತು’ ಎಂದು ಚಿಕಿತ್ಸೆ ನೀಡಿದ ವೈದ್ಯರು ಹೇಳಿದರು.

‘ಜಿಲ್ಲಾಸ್ಪತ್ರೆಗೆ ತೆರಳಿ ವೃದ್ಧೆ ಆರೋಗ್ಯ ವಿಚಾರಿಸಲಾಗಿದೆ. ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಅಧಿಕಾರಿ ನಾಮದೇವ ಬಿಲ್ಕಾರ ಅವರು ಖುದ್ದು ಭೇಟಿ ನೀಡಿದ್ದಾರೆ. ವೃದ್ಧೆಯ ಆರೋಗ್ಯ ಸುಧಾರಿಸಿದ ನಂತರ, ಇಲಾಖೆಯ ವೃದ್ಧಾಶ್ರಮಕ್ಕೆ ಸೇರಿಸಲಾಗುವುದು. ಅವರ ಸಂಬಂಧಿಕರ ಪತ್ತೆಗೆ ಪ್ರಯತ್ನ ಮಾಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎ.ಎಂ.ಬಸವರಾಜ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ