Breaking News
Home / Uncategorized / ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ

ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ

Spread the love

ಸಾಂಬ್ರಾ: ಸಮೀಪದ ಸುಳೇಭಾವಿ ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗಳು ಆಮೆಗತಿಯಲ್ಲಿ ಸಾಗುತ್ತಿವೆ. ಇನ್ನು ಕೆಲವು ಶಿಲ್ಕು ಬಿದ್ದಿವೆ. ಇದಕ್ಕೆ ನಿದರ್ಶನವೆಂದರೆ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರ, ರಸ್ತೆ ಹಾಗೂ ಚರಂಡಿ ಕಾಮಗಾರಿಗಳು.

ಗ್ರಾಮದಲ್ಲಿ ಸೂಕ್ತ ರಸ್ತೆ ಹಾಗೂ ಚರಂಡಿ ಇಲ್ಲದ ಕಾರಣ ಜನ ತೊಂದರೆ ಅನುಭವಿಸುವಂತಾಗಿದೆ.

ಕೆಲವು ಕಡೆ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಚರಂಡಿ ಕಾಮಗಾರಿ ಆರಂಭಿಸಲಾಗಿದೆ. ವರ್ಷಗಳು ಕಳೆದರೂ ಅವು ಮುಗಿದಿಲ್ಲ. ಇದರಿಂದ ಮಳೆಗಾಲದಲ್ಲಿ ಚರಂಡಿ ಎಲ್ಲೆಂದರಲ್ಲಿ ಕಟ್ಟಿಕೊಂಡು ಜನ ತೊಂದರೆ ಅನುಭವಿಸುವುದು ಸಾಮಾನ್ಯವಾಗಿದೆ.

ಸುಳೇಭಾವಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರ ಇದ್ದೂ ಇಲ್ಲದಂತಾಗಿದೆ. ಈ ಆರೋಗ್ಯ ಕೇಂದ್ರದಲ್ಲಿ ಕಳೆದ ನಾಲ್ಕೈದು ವರ್ಷದಿಂದ ಒಂದೇ ಒಂದು ಹೆರಿಗೆ ಕೂಡಾ ಮಾಡಲಾಗಿಲ್ಲ. ಆರೋಗ್ಯ ಕೇಂದ್ರದ ಆವರಣ ಅವ್ಯವಸ್ಥೆಯಿಂದ ಕೂಡಿದ್ದು, ಮರಗಳ ಎಲೆಗಳ ರಾಶಿ ಹರಡಿದೆ. ಸ್ವಚ್ಛತೆಗೆ ಆದ್ಯತೆ ನೀಡಬೇಕಿದ್ದ ಕೇಂದ್ರವೇ ಮಾಲಿನ್ಯದಿಂದ ಕೂಡಿದೆ. ಹೆಚ್ಚಿನ ಜನ ತುರ್ತು ಚಿಕಿತ್ಸೆಗೆ ಬೆಳಗಾವಿ ನಗರಕ್ಕೇ ಹೋಗುವುದರಿಂದ ಈ ಆರೋಗ್ಯ ಕೇಂದ್ರದಲ್ಲಿ ಏನಿದೆ? ಏನಿಲ್ಲ ಎಂಬ ಬಗ್ಗೆಯೂ ಜನ ತಲೆ ಕೆಡಿಸಿಕೊಂಡಿಲ್ಲ.

ಆರೋಗ್ಯ ಕೇಂದ್ರದಲ್ಲಿ ಶೌಚಾಲಯ ನಿರ್ಮಿಸಲಾಗಿದೆ. ಆದರೆ, ಅವುಗಳ ನಿರ್ವಹಣೆ ಸರಿಯಾಗಿಲ್ಲ. ಇದರಿಂದ ಸುತ್ತಲಿನ ಪ್ರದೇಶ ದುರ್ವಾಸನೆಯಿಂದ ಕೂಡಿದೆ. ಸೊಳ್ಳೆಗಳ ಕಾಟದಿಂದ ರೋಗಗಳ ಭೀತಿಯಲ್ಲೇ ಜನ ಬದುಕುವಂತಾಗಿದೆ.

ಕೇಂದ್ರದ ಸಿಬ್ಬಂದಿಯಲ್ಲಿ ಹೊಂದಾಣಿಕೆ ಕೊರತೆಯಿಂದಾಗಿ ಸಾರ್ವಜನಿಕರಿಗೆ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಲಾಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ.

ಇನ್ನೊಂದೆಡೆ, ಬೀದಿದೀಪದ ಕಂಬಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಸಿದ್ದರಿಂದ ಬೆಳಕು ಸರಿಯಾಗಿ ಬೀಳುತ್ತಿಲ್ಲ. ಹೀಗಾಗಿ ರಾತ್ರಿ ಹೊತ್ತಿನಲ್ಲಿ ವೃದ್ಧರು, ಚಿಕ್ಕ ಮಕ್ಕಳು ಟಾರ್ಚ್‌ ಬೆಳಕಿನ ಸಹಾಯದಿಂದ
ಓಡಾಡುವಂತಾಗಿದೆ.

ಅರ್ಧಕ್ಕೆ ನಿಂತ ಚರಂಡಿ ಕಾಮಗಾರಿ: ಮುಖ್ಯ ರಸ್ತೆಯಲ್ಲಿ ಕೈಗೆತ್ತಿಕೊಂಡ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದೆ. ಈ ಹಿಂದೆ ಮಾಡಿದ್ದ ಕೆಲಸವೂ ಕಿತ್ತುಕೊಂಡು ಹೋಗಿದೆ. ಹೀಗಾಗಿ, ಮನೆಗಳ ತ್ಯಾಜ್ಯ ನೀರು ಸರಿಯಾಗಿ ಮುಂದೆ ಹರಿಯದೆ ಒಂದೇ ಕಡೆ ನಿಲ್ಲುತ್ತಿದೆ. ಇದರಿಂದ ಸುತ್ತಲಿನ ಜನರಿಗೆ ಸಾಂಕ್ರಾಮಿಕ ರೋಗಗಳ ಭೀತಿ ಎದುರಾಗಿದೆ.

ಹೊಲಗಳಿಗೆ ಹೋಗಲು ಈಗಲೂ ಮಣ್ಣಿನ ರಸ್ತೆಗಳಿವೆ. ಡಾಂಬರ್‌, ಸಿಮೆಂಟ್‌ ಕಾಮಗಾರಿ ಮಾಡದ ಕಾರಣ ರೈತರು ತೊಂದರೆ ಎದುರಿಸುತ್ತಿದ್ದಾರೆ. ಇದರಿಂದ ಬೇಸತ್ತ ಕೆಲವು ರೈತರು ತಮ್ಮ ಹೊಲಗಳಿಗೆ ತಾವೇ ರಸ್ತೆ ನಿರ್ಮಿಸಿಕೊಳ್ಳಲು ಮುಂದಾಗಿದ್ದಾರೆ. ಈಗಾಗಲೇ ಜೆಸಿಬಿ ಯಂತ್ರಗಳನ್ನು ತರಿಸಿ, ನೆಲ ಸಮತಟ್ಟು ಮಾಡಿಸಿದ್ದಾರೆ.


Spread the love

About Laxminews 24x7

Check Also

ಮಳೆ.. ಮಳೆ.. ಆರ್‌ಸಿಬಿ VS ಚೆನ್ನೈ ಮ್ಯಾಚ್ ರದ್ದು?

Spread the love ಮಳೆ.. ಮಳೆ.. ಎಲ್ಲೆಲ್ಲೂ ಮಳೆಯ ಅಬ್ಬರ ಶುರುವಾಗಿದೆ. ಅದರಲ್ಲೂ ಬೆಂಗಳೂರು & ಚೆನ್ನೈ ನಡುವೆ ಇಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ