Breaking News

ಆಸ್ಪತ್ರೆಯಲ್ಲಿ ಬೆಂಕಿ: ದಟ್ಟ ಹೊಗೆಗೆ ಉಸಿರುಗಟ್ಟಿ ವೈದ್ಯ ದಂಪತಿ ಸೇರಿ ಐವರ ಸಾವು

Spread the love

ಧನ್ಬಾದ್(ಜಾರ್ಖಂಡ್​​): ಇಲ್ಲಿನ ಎಕ್ಸ್‌ಚೇಂಜ್ ರಸ್ತೆಯಲ್ಲಿರುವ ಹಾಜ್ರಾ ಆಸ್ಪತ್ರೆಯಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ವೈದ್ಯ ದಂಪತಿ ಸೇರಿದಂತೆ ಐವರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.

ಇನ್ನೊಬ್ಬರು ತೀವ್ರ ಅಸ್ವಸ್ಥರಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಆಸ್ಪತ್ರೆಯಲ್ಲಿ ಸಿಕ್ಕಿಹಾಕಿಕೊಂಡಿದ್ದ ರೋಗಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

ಹಾಜ್ರಾ ಆಸ್ಪತ್ರೆಗೆ ಹೊಂದಿಕೊಂಡಂತೆ ವೈದ್ಯ ದಂಪತಿ ವಾಸಿಸುತ್ತಿದ್ದರು. ಆಸ್ಪತ್ರೆ ಮತ್ತು ವೈದ್ಯರ ಮನೆ ಮಧ್ಯೆ ಚಿಕ್ಕದಾದ ದಾರಿ ಇದೆ. ಆಸ್ಪತ್ರೆಯಲ್ಲಿ ಬೆಂಕಿ ಹೊತ್ತಿಕೊಂಡಿದೆ. ಇದರಿಂದ ಇಡೀ ಆಸ್ಪತ್ರೆ ಹೊಗೆಯಿಂದ ತುಂಬಿಕೊಂಡಿತ್ತು. ಇದು ವೈದ್ಯ ದಂಪತಿ ಮನೆಗೂ ವ್ಯಾಪಿಸಿದೆ. ಈ ವೇಳೆ ವೈದ್ಯ ದಂಪತಿ, ಮನೆಯ ಕೆಲಸದಾಕೆ ಮತ್ತು ಇನ್ನಿಬ್ಬರು ದಟ್ಟ ಹೊಗೆಯಿಂದ ಹೊರಬರಲಾಗದೇ ಮನೆಯಲ್ಲೇ ಸಿಕ್ಕಿಕೊಂಡು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮನೆಯಲ್ಲಿದ್ದ ಪ್ರೀತಿಯ ನಾಯಿಯೂ ಕೂಡ ಪ್ರಾಣ ಕಳೆದುಕೊಂಡಿದೆ.

ಆಸ್ಪತ್ರೆ ಮತ್ತು ವೈದ್ಯ ಮನೆಯ ನಡುವಿದ್ದ ದಾರಿಯನ್ನು ಬಂದ್​ ಮಾಡಲಾಗಿತ್ತು. ಹೀಗಾಗಿ ಅವರು ಮನೆಯಿಂದ ಹೊರಬರಲಾಗಿಲ್ಲ. ಇದ್ದಕ್ಕಿದ್ದಂತೆ ಜೋರಾದ ಸದ್ದಿನೊಂದಿಗೆ ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಆಸ್ಪತ್ರೆಯಲ್ಲಿ ವೈದ್ಯರು, ರೋಗಿಗಳು ಇದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಎಲ್ಲರನ್ನೂ ಅಲ್ಲಿಂದ ಸ್ಥಳಾಂತರಿಸಲಾಗಿದೆ.


Spread the love

About Laxminews 24x7

Check Also

ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ

Spread the love ಕ್ಯಾಂಟರ್-ಬೈಕ್ ಡಿಕ್ಕಿ: ಧಾರವಾಡ ಮೂಲದ ಯುವಕನ ದುರ್ಮರಣ ಜಾಂಬೋಟಿ-ಚೋರ್ಲಾ ರಸ್ತೆಯ ಹಬ್ಬನಹಟ್ಟಿ ಕ್ರಾಸ್ ಬಳಿ ಇರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ