ಬೆಂಗಳೂರು: ರಾಜ್ಯದಲ್ಲಿನ ಜವಾಹರ್ ನವೋದಯ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸರ್ವರ್ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ಪೋಷಕರಿಗೆ ಸಾಧ್ಯವಾಗಿಲ್ಲ.
ಆನ್‌ಲೈನಲ್ಲಿ ಅರ್ಜಿ ಸಲ್ಲಿಸಲು ಇದೇ ಜನವರಿ 31 ಕೊನೆಯ ದಿನ.
ಪ್ರತಿ ದಿನವೂ ಸರ್ವರ್ ಸಮಸ್ಯೆ ಇದೆ. ನಿತ್ಯವೂ ಸೈಬರ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಲು ಸಾಧ್ಯವಾಗದೇ ಮರಳುತ್ತಿದ್ದೇವೆ. ಸರ್ವರ್ ಸಮಸ್ಯೆ ಬಗೆಹರಿಸಬೇಕು. ಇಲ್ಲವೇ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಿಸಬೇಕು ಎಂದು ಗದಗ ಜಿಲ್ಲೆಯ ರಾಮಚಂದ್ರ ಒತ್ತಾಯಿಸಿದ್ದಾರೆ.
ಪ್ರತಿ ಜಿಲ್ಲೆಯ ನವೋದಯ ಶಾಲೆಯಲ್ಲೂ ಆ ಜಿಲ್ಲೆಯ ವಿದ್ಯಾರ್ಥಿಗಳಿಗಷ್ಟೆ ಪ್ರವೇಶ ನೀಡಲಾಗುತ್ತದೆ. 2022-23ನೇ ಸಾಲಿನಲ್ಲಿ 5ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆ ಪರೀಕ್ಷೆಗಳು ಏ.29ರಂದು ನಡೆಯಲಿವೆ.
Laxmi News 24×7