Breaking News

ನಾನು ಬೆಳಗಾವಿಗೆ ಮತ್ತೊಮ್ಮೆ ಬರುತ್ತೇನೆ ಅಷ್ಟರೊಳಗೆ ಎಲ್ಲ ಭಿನ್ನಮತ ಮುಗಿದಿರಬೇಕು:ಅಮಿತ್ ಶಾ

Spread the love

ಹುಬ್ಬಳ್ಳಿ: ನಾಲ್ಕೈದು ತಿಂಗಳಲ್ಲಿ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈ ಸಲ ತ್ರಿಕೋನ ಸ್ಪರ್ಧೆಯಿಲ್ಲ, ಬಿಜೆಪಿ- ಕಾಂಗ್ರೆಸ್ ನಡುವೆ ನೇರ ಸ್ಪರ್ಧೆ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.

ಧಾರವಾಡ ಜಿಲ್ಲೆಯ ಕುಂದಗೋಳದಲ್ಲಿ ಶನಿವಾರ ಬಿಜೆಪಿ ಹಮ್ಮಿಕೊಂಡ ‘ವಿಜಯ ಸಂಕಲ್ಪ ಅಭಿಯಾನ’ ಅಂಗವಾಗಿ ರೋಡ್ ಶೋ ನಡೆಸಿದ ನಂತರ ಅವರು ಮಾತನಾಡಿದರು.

 

ರಾಜ್ಯದಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಷ್ಟೆ ಅಲ್ಲ, ಜೆಡಿಎಸ್‌ಗೆ ಮತ ನೀಡಿದರೂ ಅದು ಕಾಂಗ್ರೆಸ್‌ಗೆ ಹೋದಂತೆ. ಚುನಾವಣೆ ಬಿಜೆಪಿ- ಕಾಂಗ್ರೆಸ್ ನಡುವೆ ನೇರಾನೇರವಾಗಿ ನಡೆಯಲಿದೆ ಎಂದರು.

25-30 ಸ್ಥಾನ ಗೆದ್ದು ಮುಖ್ಯಮಂತ್ರಿಯಾಗುವ ಕನಸನ್ನು ಜೆಡಿಎಸ್ ನವರು ಕಾಣುತ್ತಿದ್ದಾರೆ. ಇನ್ನು ಕೆಲವು ಕಾಂಗ್ರೆಸ್ಸಿಗರು, ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಕಾಂಗ್ರೆಸ್ ಹೈಕಮಾಂಡ್‌ಗೆ ಪೇಟಿಎಂ ಆಗಿತ್ತು ಎಂದು ಟೀಕಿಸಿದ ಅವರು, ಕಾಂಗ್ರೆಸ್ ಗಾಂಧಿ ಕುಟುಂಬದ ಪಕ್ಷವಾಗಿದ್ದರೆ, ಜೆಡಿಎಸ್ ಪಕ್ಷವು ಅಪ್ಪ, ಮಕ್ಕಳು, ಮೊಮ್ಮಕ್ಕಳ ಪಕ್ಷವಾಗಿದೆ. ಅಲ್ಲಿ ಸಾಮಾನ್ಯ ಜನರಿಗೆ, ಯುವಕರಿಗೆ ಎಲ್ಲಿದೆ ಅವಕಾಶ ಎಂದು ಪ್ರಶ್ನಿಸಿದರು.

ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿವೆ. ಇದಕ್ಕೆ ಕೊನೆ ಹಾಡಲು ಬಿಜೆಪಿಗೆ ಮತ ನೀಡಿ ಎಂದು ಮನವಿ ಮಾಡಿಕೊಂಡರು.


Spread the love

About Laxminews 24x7

Check Also

ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸೌರಶಕ್ತಿ ಬಲ

Spread the loveಹುಬ್ಬಳ್ಳಿ: ವಾಣಿಜ್ಯ ‌ನಗರಿ ಹುಬ್ಬಳ್ಳಿ ವಿಮಾನ ‌ನಿಲ್ದಾಣ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ‌. ಇದರ ಭಾಗವಾಗಿ ಹುಬ್ಬಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ