Breaking News

ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಿಸಲಿ’:.ನಿರ್ಮಲಾ‌ ಬಟ್ಟಲ್‌

Spread the love

ಬೆಳಗಾವಿ: ‘ಸಮಾಜದಲ್ಲಿ ಎಲ್ಲ ವರ್ಗಗಳ ಜನರು ಸುಂದರವಾಗಿ ಕಾಣಲು ಕಾರಣವಾಗಿರುವ ಸವಿತಾ ಸಮುದಾಯದವರ ಜೀವನಮಟ್ಟ ಸುಧಾರಣೆಯಾಗಬೇಕು. ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ಅವರೂ ಬೆಳೆಯಬೇಕು’ ಎಂದು ಎಂಎನ್‌ಆರ್‌ಎಸ್‌ ಬಿ.ಇಡಿ ಕಾಲೇಜಿನ ಪ್ರಾಚಾರ್ಯೆ ಪ್ರೊ.ನಿರ್ಮಲಾ‌ ಬಟ್ಟಲ್‌ ಹೇಳಿದರು.

 

ಇಲ್ಲಿನ ಕುಮಾರ‌ ಗಂಧರ್ವ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಶನಿವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಗಜಾನನ ಕಾಶೀದ್‌, ಉಪಾಧ್ಯಕ್ಷೆ ನೀಲಮ್ಮ ಟಿಪ್ಪುಪುಡೆ ಹಾಜರಿದ್ದರು.

ಇದಕ್ಕೂ ಮುನ್ನ, ಕೋಟೆ ಕೆರೆ ಬಳಿ ಇರುವ ಅಶೋಕ ವೃತ್ತದಿಂದ ರಂಗಮಂದಿರದವರೆಗೆ ನಡೆದ ಮೆರವಣಿಗೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಚಾಲನೆ ನೀಡಿದರು.


Spread the love

About Laxminews 24x7

Check Also

ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ

Spread the love ಅಥಣಿ ನಗರದ ಪ್ರವಾಸಿ ಮಂದಿರದಲ್ಲಿ ಇಂದು ಸಾರ್ವಜನಿಕರ ಅಹವಾಲು ಆಲಿಸಿ, ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ