Breaking News

ಹಾಸನ ರಾಜಕೀಯ ಅಖಾಡಕ್ಕಿಳಿದ ದೇವೇಗೌಡ್ರು

Spread the love

ಹಾಸನ: ಕಳೆದ ಎರಡು ಮೂರು ದಿನಗಳಿಂದ ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ವಿಚಾರ ರಾಜ್ಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದೆ. ರೇವಣ್ಣ ಪತ್ನಿ ಭವಾನಿ ರೇವಣ್ಣ ಹಾಸನ ಕ್ಷೇತ್ರದ ಅಭ್ಯರ್ಥಿ ನಾನೇ ಎಂದು ಸ್ವಯಂ ಘೋಷಣೆ ಮಾಡಿಕೊಂಡಿದ್ದರು. ಆದರೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹಾಸನದಲ್ಲಿ ಸೂಕ್ತ ಅಭ್ಯರ್ಥಿ ಇದ್ದಾರೆ, ಅಲ್ಲಿಗೆ ಭವಾನಿ ರೇವಣ್ಣರನ್ನು ಅಭ್ಯರ್ಥಿಯನ್ನಾಗಿ ಮಾಡುವ ಅನಿವಾರ್ಯತೆ ಇಲ್ಲ ಎಂದು ಹೇಳಿದ್ದರು.

ಕುಮಾರಸ್ವಾಮಿ ಈ ರೀತಿ ಹೇಳಿಕೆ ನೀಡುತ್ತಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಕುಮಾಸ್ವಾಮಿ ಅಥವಾ ರೇವಣ್ಣ ಆಗಲಿ ಬಿ ಫಾರ್ಮ್ ನೀಡುವುದಿಲ್ಲ, ಚುನಾವಣೆಗೆ ಬಿ ಫಾರ್ಮ್ ನೀಡುವವರು ಎಚ್‌ಡಿ ದೇವೇಗೌಡರು ಎಂದು ಹೇಳಿದ್ದರು.

ಈಗಾಗಲೇ ಕುಟುಂಬ ರಾಜಕಾರಣದ ಹಣೆಪಟ್ಟಿ ಹೊತ್ತುಕೊಂಡಿ ರುವ ದೇವೇಗೌಡರ ಕುಟುಂಬಕ್ಕೆ ಹಾಸನ ಟಿಕೆಟ್ ಗೊಂದಲ ದೊಡ್ಡ ತಲೆ ನೋವು ತಂದಿತ್ತು. ಇದೀಗ ಈ ವಿವಾದವನ್ನು ಕೊನೆಗೊಳಿಸಲು ಸ್ವತಃ ಜೆಡಿಎಸ್ ವರಿಷ್ಠ ದೇವೇಗೌಡರೇ ಎಂಟ್ರಿ ಕೊಟ್ಟಿದ್ದು, ಹಾಸನ ಟಿಕೆಟ್ ವಿಚಾರವನ್ನು ಫೈನಲ್ ಮಾಡುತ್ತೇನೆ, ಇದರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಎಂದಿದ್ದಾರೆಂದು ತಿಳಿದುಬಂದಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ