ಬೆಳಗಾವಿ: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪ ಯುದ್ಧ ವಿಮಾನಗಳ ಮಧ್ಯೆ ಶನಿವಾರ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟ ಪೈಲಟ್, ವಿಂಗ್ ಕಮಾಂಡರ್ ಹನುಮಂತರಾವ್ ಸಾರಥಿ ಅವರ ಅಂತ್ಯಕ್ರಿಯೆ ತಾಲ್ಲೂಕಿನ ಬೆನಕನ ಹಳ್ಳಿಯ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಭಾನುವಾರ ನೆರವೇರಿತು.
ಕುರುಬ ಸಮುದಾಯದ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿತು. ಹಿರಿಯ ಸಹೋದರ ಪ್ರವೀಣ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಗಣೇಶಪುರದ ಮುಖ್ಯ ರಸ್ತೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ಮಾಡಲಾಯಿತು.
Laxmi News 24×7