Breaking News

ಸಾವಯವ ಕೃಷಿಗಾಗಿ ಜಾಗೃತಿ: ಬಿಜೆಪಿ ರೈತ ಮೋರ್ಚಾ ಕಾರ್ಯಕಾರಿಣಿ ನಿರ್ಣಯ

Spread the love

ಬೆಳಗಾವಿ: ರೈತರು ಸಾವಯವ ಕೃಷಿಗೆ ಆದ್ಯತೆ ನೀಡುವಂತೆ ದೇಶದ ಒಂದು ಲಕ್ಷ ಹಳ್ಳಿಗಳಲ್ಲಿ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯ ತೆಗೆದುಕೊಳ್ಳಲಾಯಿತು.

ನಗರದಲ್ಲಿ ಎರಡು ದಿನಗಳ ಕಾಲ ಜರಗಿದ ಬಿಜೆಪಿ ರೈತ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ತೆಗೆದುಕೊಳ್ಳಲಾಯಿತು.

ಕೊನೆಯ ದಿನವಾದ ಸೋಮವಾರ ಸಭೆಯ ಸಮಾರೋಪದಲ್ಲಿ ರಾಷ್ಟ್ರೀಯ ಸಂಘಟನ ಕಾರ್ಯದರ್ಶಿ ಬಿ.ಎಲ್‌. ಸಂತೋಷ, ಕೃಷಿ ಸಚಿವ ಬಿ.ಸಿ. ಪಾಟೀಲ್‌, ರೈತ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ರಾಜಕುಮಾರ ಚಾಹರ್‌ ಸಹಿತ ಅನೇಕರು ಹಲವು ಸಲಹೆಗಳನ್ನು ನೀಡಿದರು.

ಅಭಿಯಾನಕ್ಕೆ ಮೋದಿ ಚಾಲನೆ
ರೈತ ಮೋರ್ಚಾ ಪದಾ ಧಿಕಾರಿಗಳಿಗೆ ದಿಲ್ಲಿಯಲ್ಲಿ ಸಾವಯವ ಕೃಷಿ ಹಾಗೂ ಸಿರಿಧಾನ್ಯಗಳನ್ನು ಬೆಳೆಸುವುದರ ಬಗ್ಗೆ ತರಬೇತಿ ನೀಡಿ ಅಭಿಯಾನ ಆರಂಭಿಸಲಾಗುವುದು. ಉತ್ತರ ಪ್ರದೇಶದ ಗಂಗಾ ನದಿ ತಟದಲ್ಲಿರುವ ಶುಕ್ರತಾಲ್‌ನಲ್ಲಿ ಫೆಬ್ರವರಿ ಕೊನೆಯ ವಾರ ಅಭಿಯಾನಕ್ಕೆ ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ ಸೇರಿ ಹಲವರು ಚಾಲನೆ ನೀಡಲಿದ್ದಾರೆ. 5 ಕಿ.ಮೀ.ವರೆಗೆ ಪಾದಯಾತ್ರೆ ನಡೆಸಿ ರೈತರಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ರಾಜಕುಮಾರ ಚಾಹರ್‌ ಹೇಳಿದರು.

ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ವಿಧಾನ ಪರಿಷತ್‌ ಸದಸ್ಯ ಎನ್‌. ರವಿಕುಮಾರ್‌ ಮುಂತಾದವರು ಉಪಸ್ಥಿತರಿದ್ದರು.

ಸಿರಿಧಾನ್ಯ: ಹೆಕ್ಟೇರ್‌ಗೆ 15 ಸಾ. ರೂ.
ಸಿರಿಧಾನ್ಯ ಬೆಳೆಯುವ ರೈತರ ಪ್ರತಿ ಹೆಕ್ಟೇರ್‌ಗೆ 15 ಸಾವಿರ ನೀಡುವಂತೆ ಸರಕಾರದ ಮೇಲೆ ಒತ್ತಡ ತರಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್‌ ತಿಳಿಸಿದರು.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ