Breaking News

ಸೋಮಶೇಖರ ರೆಡ್ಡಿ ವಿರುದ್ಧ ಅತ್ತಿಗೆ ಸ್ಪರ್ಧೆ

Spread the love

ಗಂಗಾವತಿ: ಬಳ್ಳಾರಿ ನಗರ ಕ್ಷೇತ್ರದಲ್ಲಿ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಸ್ಪರ್ಧಿಸಲಿದ್ದಾರೆ. ಈ ಬಗ್ಗೆ ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಜನಾರ್ದನ ರೆಡ್ಡಿ ಮಂಗಳವಾರ ಗಂಗಾವತಿಯಲ್ಲಿ ಘೋಷಣೆ ಮಾಡಿ, ಸವಾಲು ಹಾಕಿದ್ದಾರೆ.

 

ಇತಿಹಾಸ ಪ್ರಸಿದ್ಧ ಆನೆಗೊಂದಿಯಿಂದ ಪಕ್ಷ ದ ಪ್ರಚಾರ ರಥಯಾತ್ರೆಗೆ ಕುಟುಂಬ ಸಮೇತರಾಗಿ ಚಾಲನೆ ನೀಡಿದ ಅವರು, ಸೋದರನ ವಿರುದ್ಧ ತೊಡೆ ತಟ್ಟಿದರು. ಶ್ರೀರಾಮಚಂದ್ರನಿಗೆ ಆತ್ಮಸ್ಥೈರ್ಯ ತುಂಬಿದ ಕಿಷ್ಕಿಂದೆ ಪ್ರದೇಶದಿಂದಲೇ ಕಹಳೆ ಮೊಳಗಿಸಿದ್ದೇನೆ ಎಂದರು.

2008ರಲ್ಲಿ ಹಿರಿಯರಾದ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಬಹುಮತ ಬರದಿದ್ದರೂ ಪಕ್ಷೇತರರ ನೆರವಿನಿಂದ ಸರಕಾರ ರಚನೆ ಮಾಡಿಸಿದೆ. ಅನಂತರ ರಾಜಕೀಯ ಸೇಡಿಗಾಗಿ ಹಲವು ಪ್ರಕರಣಗಳಲ್ಲಿ ತಮ್ಮನ್ನು ಸಿಲುಕಿಸಲಾಯಿತು. ಯಾರ ಮನೆಯನ್ನೂ ಕೊಳ್ಳೆ ಹೊಡೆದಿಲ್ಲ ಎಂದು ರೆಡ್ಡಿ ದೂರಿದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ