Breaking News

ಕುಡಿದ ಮತ್ತಿನಲ್ಲಿ ಹೆಂಡತಿ- ಮಕ್ಕಳ ಮೇಲೆ ಕೊಡಲಿಯಿಂದ ಹಲ್ಲೆ

Spread the love

ಹುಬ್ಬಳ್ಳಿ: ಗಂಡನೊಬ್ಬ ಕುಡಿದ ಮತ್ತಿನಲ್ಲಿ ಹೆಂಡತಿ ಹಾಗೂ ಮೂವರು ಮಕ್ಕಳ ಮೇಲೆ ಕೊಡಲಿ, ಸುತ್ತಿಗೆಯಿಂದ ಮಾರಣಾಂತಿಕ ಹಲ್ಲೆ ಮಾಡಿ ತಾನು ಕೂಡ ನೇಣಿಗೆ ಶರಣಾದ ಘಟನೆ ತಾಲೂಕಿನ ಸುಳ್ಳ ಗ್ರಾಮದಲ್ಲಿ ಬುಧವಾರ ಬೆಳಗಿನ ಜಾವ ನಡೆದಿದೆ.

ಸುಳ್ಳ ಗ್ರಾಮದ ಪಕ್ಕೀರಪ್ಪ ಮಾದರ ಎಂಬಾತ ಇಂದು ಬೆಳಗಿನ ನಾಲ್ಕು ಗಂಟೆ ಸುಮಾರಿಗೆ ಮನೆಯಲ್ಲಿನ ಟಿವಿ ಸೌಂಡ್ ಜಾಸ್ತಿ ಮಾಡಿ ಮಾರಕಾಸ್ತ್ರದಿಂದ ಹೆಂಡತಿ ಮುದಕವ್ವನ ಮೇಲೆ ಹಲ್ಲೆ ನಡೆಸಿದಾಗ ಜೋರಾಗಿ ಕಿರುಚಿದ್ದಾಳೆ.

ಆಗ ಮಲಗಿದ್ದ ಮೂರು ಮಕ್ಕಳು ಎದ್ದು ಅಳಲು ಶುರು ಮಾಡಿದಾಗ ಅಂತಕಕ್ಕೀಡಾದ ಪಕ್ಕೀರಪ್ಪನು ತನ್ನ ಮೂರು ಮಕ್ಕಳ ಮೇಲೂ ಅದೇ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾನೆ. ಅವರು ರಕ್ತಸಿಕ್ತದಲ್ಲಿ ಪ್ರಜ್ಞಾಹೀನವಾಗಿ ಬಿದ್ದಿರುವುದನ್ನು ಕಂಡು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಹಲ್ಲೆಯಲ್ಲಿ ಮಗ ಮೃತಪಟ್ಟಿದ್ದಾನೆ. ಪತ್ನಿ, ಇಬ್ಬರು ಪುತ್ರಿಯರ ಸ್ಥಿತಿ ಗಂಭೀರವಾಗಿದೆ.

ಗೌಂಡಿ ಕೆಲಸ ಮಾಡಿಕೊಂಡಿದ್ದ ಫಕ್ಕೀರಪ್ಪನು ಅನಾರೋಗ್ಯದಿಂದ ಬಳಲುತ್ತಿದ್ದ ಹಾಗೂ ಮದ್ಯವ್ಯಸನಿ ಕೂಡ ಆಗಿದ್ದ. ಬುಧವಾರ ಎಲ್ಲರೂ ಮಲಗಿಕೊಂಡಿದ್ದ ವೇಳೆ ಸುತ್ತಿಗೆಯಿಂದ ತಲೆ ಮೇಲೆ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಪುತ್ರ ಶ್ರೇಯಸ್ ಊರ್ಫ್ ಮೈಲಾರಪ್ಪ (6) ಚಿಕಿತ್ಸೆಗೆ ಸ್ಪಂದಿಸಿದೆ ಮೃತಪಟ್ಟರೆ, ಪತ್ನಿ ಮುದಕವ್ವ (30), ಪುತ್ರಿಯರಾದ ಶಾಮಲಾ (8), ಸೃಷ್ಟಿ (4) ಗಂಭೀರವಾಗಿ ಗಾಯಗೊಂಡಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾರೆ. ಕಿಮ್ಸ್ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಸ್ಥಿತಿಯು ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಬೆಳ್ಳಗ್ಗೆ 6:00 ಗಂಟೆ ಸುಮಾರಿಗೆ ಮನೆಯ ಅಕ್ಕಪಕ್ಕದವರು ಟಿವಿ ಸೌಂಡ್ ಕೇಳಿ ಬಾಗಿಲು ಬಡಿದಾಗ ಯಾರು ಬಾಗಿಯಲು ತೆರೆಯದಿದ್ದಾಗ ಮುರಿದಿದ್ದಾರೆ. ಆಗ ರಕ್ತದ ಮಡುವಿನಲ್ಲಿ ಮೂವರು ಮಕ್ಕಳು ಹಾಗೂ ಮುದಕವ್ವ ಬಿದ್ದಿದ್ದನ್ನು ನೋಡಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಎಸ್ ಪಿ ಹಾಗೂ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ ಸ್ಪೆಕ್ಟರ್ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ

Spread the loveನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ