Breaking News

ಹಾಲಿ ಶಾಸಕರಿಗೆ ಟಿಕೆಟ್‌ ಪಕ್ಕಾ: ಆಕಾಂಕ್ಷಿಗಳಲ್ಲಿ ತಳಮಳ

Spread the love

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಹಾಲಿ ಶಾಸಕರಿಗೆ ಟಿಕೆಟ್‌ ಬಹುತೇಕ ಪಕ್ಕಾ ಆಗಿರುವುದರಿಂದ ಆ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದವರಲ್ಲಿ ತಳಮಳ ಶುರುವಾಗಿದೆ.

 

ತಮಗೇ ಟಿಕೆಟ್‌ ಸಿಗಬಹುದು ಎಂಬ ನಿರೀಕ್ಷೆಯಿಂದ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳಿಗೆ ನಿರಾಶೆಯಾಗಿದ್ದು, ಇದರ ಪರಿಣಾಮ ಕೆಲವು ಕ್ಷೇತ್ರಗಳಲ್ಲಿ ಬಂಡಾಯ ಅಥವಾ ಪಕ್ಷಾಂತರ ಕಾಣಿಸಬಹುದು. ಆದರೆ ಬಹುತೇಕ ಕ್ಷೇತ್ರಗಳಲ್ಲಿ ಪ್ರಭಾವಿ ಶಾಸಕರ ವಿರುದ್ಧ ‘ನಾಮಕಾವಸ್ಥೆ’ಗೆ ಅರ್ಜಿ ಸಲ್ಲಿಸಿರುವವರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ.

ಎಂ.ಬಿ.ಪಾಟೀಲ್‌, ಡಿ.ಕೆ.ಶಿವಕುಮಾರ್‌, ಕೆ.ಜೆ.ಜಾರ್ಜ್‌, ಎಂ.ಕೃಷ್ಣಪ್ಪ, ರಾಮಲಿಂಗಾರೆಡ್ಡಿ, ದಿನೇಶ್‌ ಗುಂಡೂರಾವ್‌, ಡಾ.ಅಜಯ್‌ಸಿಂಗ್‌, ಪ್ರಿಯಾಂಕ್‌ ಖರ್ಗೆ, ಹ್ಯಾರೀಸ್‌ ಸೇರಿ ಹಾಲಿ ಶಾಸಕರು ಇರುವ ಕಡೆ ಆಕಾಂಕ್ಷಿಗಳು ಅರ್ಜಿ ಹಾಕಿರುವುದು ಕಡಿಮೆಯೇ. ಈಗ ಟಿಕೆಟ್‌ ಸಿಗದಿದ್ದರೂ ಪಕ್ಷ ಅಧಿಕಾರಕ್ಕೆ ಬಂದರೆ ಪರಿಷತ್‌ ಸದಸ್ಯತ್ವ, ನಿಗಮ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಡಬಹುದು ಎಂಬ ಕಾರಣಕ್ಕೆ ಹಾಕಿದ್ದಾರೆ ಎಂದು ಹೇಳಲಾಗಿದೆ.

ಎಚ್‌.ಕೆ.ಪಾಟೀಲ್‌ ಅವರು ಪ್ರತಿನಿಧಿಸುವ ಗದಗ ಕ್ಷೇತ್ರದಿಂದ ಬಲರಾಮ ಬಸವ, ನಂಜೇಗೌಡ ಪ್ರತಿನಿಧಿಸುವ ಮಾಲೂರು ಕ್ಷೇತ್ರದಿಂದ ಮಾಜಿ ಶಾಸಕ ಎ.ನಾಗರಾಜು, ಅಖಂಡ ಶ್ರೀನಿವಾಸ ಮೂರ್ತಿ ಪ್ರತಿನಿಧಿಸುವ ಪುಲಿಕೇಶಿನಗರದಿಂದ ಮಾಜಿ ಶಾಸಕ ಪ್ರಸನ್ನಕುಮಾರ್‌, ರಿಜ್ವಾನ್‌ ಅರ್ಷದ್‌ ಪ್ರತಿನಿಧಿಸುವ ಶಿವಾಜಿನಗರದಿಂದ ಎಸ್‌.ಎ.ಹುಸೇನ್‌, ರೂಪಕಲಾ ಪ್ರತಿನಿಧಿಸುವ ಕೆಜಿಎಫ್ನಿಂದ ಸಿ.ವಿ.ಬಾಲಕೃಷ್ಣ, ವೆಂಕಟರಮಣಪ್ಪ ಪ್ರತಿನಿಧಿಸುವ ಪಾವಗಡದಿಂದ ಕೃಷ್ಣಾನಾಯಕ್‌ ಸೇರಿಹಲವರು ಅರ್ಜಿ ಹಾಕಿದ್ದಾರೆ. ಅದೇ ಕ್ಷೇತ್ರದಿಂದ ಮಾಜಿ ಸಂಸದ ಚಂದ್ರಪ್ಪ ಆಕಾಂಕ್ಷಿ ಆದರೂ ಕ್ಷೇತ್ರದ ಹೆಸರು ಹೈಕಮಾಂಡ್‌ ತೀರ್ಮಾನಕ್ಕೆ ಎಂದು ಬಿಟ್ಟಿದ್ದಾರೆ.

ಆದರೆ, ಈ ಕ್ಷೇತ್ರಗಳ ಪೈಕಿ ಅಂತಿಮವಾಗಿ ಹಾಲಿ ಶಾಸಕರಿಗೆ ಟಿಕೆಟ್‌ ಕೊಟ್ಟರೆ ಎರಡು ಕ್ಷೇತ್ರಗಳಲ್ಲಿ ಬಂಡಾಯದ ಲಕ್ಷಣಗಳಿವೆ.

ಕೆಪಿಸಿಸಿ ಚುನಾವಣಾ ಸಮಿತಿ ವತಿಯಿಂದ ಸಿದ್ಧಪಡಿಸಿರುವ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದರೂ ಎಐಸಿಸಿ ತೀರ್ಮಾನ ಅಂತಿಮವಾಗುವ ಕಾರಣ ಬ್ಲಾಕ್‌ ಹಾಗೂ ಜಿಲ್ಲಾ ಮಟ್ಟದಿಂದ ಶಿಫಾರಸು ಆಗಿರುವ ಪಟ್ಟಿಯಲ್ಲಿ ಇದೆ ಎಂಬ ಕಾರಣ ಮುಂದಿಟ್ಟು ಈಗಾಗಲೇ ಹೈಕಮಾಂಡ್‌ ಕದ ತಟ್ಟಲು ಮುಂದಾಗಿದ್ದಾರೆ.


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ