ಹುಬ್ಬಳ್ಳಿ: ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಅವಧಿ ಮುಗಿದ ಮಾತ್ರೆ ಹಾಗೂ ಚುಚ್ಚುಮದ್ದು ಪತ್ತೆಯಾಗಿರುವ ಆತಂಕಕಾರಿ ಸಂಗತಿಯೊಂದು ಹೊರಬಂದಿದೆ. ಲೋಕಾಯುಕ್ತ ತಂಡ ಆಸ್ಪತ್ರೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ವಿಷಯ ಬೆಳಕಿಗೆ ಬಂದಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕು ಆಸ್ಪತ್ರೆಯಲ್ಲಿ ಅವಧಿ ಮುಗಿದ ಮಾತ್ರೆಗಳು ಮತ್ತು ಇಂಜೆಕ್ಷನ್ಗಳು ಪತ್ತೆಯಾಗಿವೆ. ಈ ತಾಲೂಕಾಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾಗ ಕೆಲವು ಮಾತ್ರೆ-ಇಂಜೆಕ್ಷನ್ಗಳ ಅವಧಿ ಮುಗಿದಿರುವುದು ಕಂಡುಬಂದಿತ್ತು.
ಲೋಕಾಯುಕ್ತ ಅಧಿಕಾರಿಗಳು ಆಸ್ಪತ್ರೆ ಸಿಬ್ಬಂದಿಯನ್ನು ಪ್ರಶ್ನಿಸಿದಾಗ ಅವರು ತಬ್ಬಿಬ್ಬಾದರು. ರಿಜಿಸ್ಟರ್ ಎಲ್ಲಿದೆ ಎಂದು ಕೇಳಿದರೂ ಏನೂ ಹೇಳದೆ ಸರಿಯಾದ ಉತ್ತರ ಬಂದಿರಲಿಲ್ಲ. ಸಾಕಷ್ಟು ಪ್ರಮಾಣದಲ್ಲಿ ರೋಗಿಗಳು ಅದರಲ್ಲೂ ಬಡವರು ಬರುವ ಈ ಆಸ್ಪತ್ರೆಯಲ್ಲಿ ಇಂಥ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.