Breaking News
Home / ರಾಜಕೀಯ / ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ

ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ

Spread the love

ಬೆಳಗಾವಿ: ಒಂದೂವರೆ ವರ್ಷದ ನಂತರ ಬೆಳಗಾವಿ ಮಹಾನಗರ ಪಾಲಿಕೆ ಸದಸ್ಯರಿಗೆ ಅಧಿಕಾರಿ ಸಿಗುವ ಯೋಗ ಕೂಡಿ ಬಂದಿದೆ. ಫೆ. 6ರಂದು ಮೇಯರ್‌- ಉಪ ಮೇಯರ್‌ ಚುನಾವಣೆ ನಡೆಯಲಿದ್ದು, ಆಕಾಂಕ್ಷಿಗಳು ತುದಿಗಾಲಲ್ಲಿ ನಿಂತಿದ್ದಾರೆ. ಆದರೆ ಸ್ಮಾರ್ಟ್‌ಟಿಸಿಯ ಪ್ರಥಮ ಪ್ರಜೆ ಯಾರಾಗಲಿದ್ದಾರೆ ಎಂಬುದು ಮಾತ್ರ ಇನ್ನೂ ನಿಗೂಢವಾಗಿದೆ.

 

ಚುನಾವಣಾ ಪ್ರಕ್ರಿಯೆಗೆ ಕೋರ್ಟ್‌ ಅನುಮತಿ ನೀಡಿ ಎರಡು ವಾರಗಳಾಗಿದ್ದು, ಅಂದಿನಿಂದಲೂ ತೆರೆಮರೆಯಲ್ಲಿ ಇನ್ನಿಲ್ಲದ ಕಸರತ್ತುಗಳು ನಡೆದಿವೆ. ಯಾರಿಗೆ ಕುರ್ಚಿ ಎಂಬುದನ್ನು ಈಗಲೇ ಘೋಷಣೆ ಮಾಡಿದರೆ ಅಸಮಾಧಾನ ಉಂಟಾದವರು ಚದುರಿ ಹೋಗುವ ಸಾಧ್ಯತೆಯೂ ಇದೆ. ಈ ಕಾರಣಕ್ಕಾಗಿಯೇ ಬಿಜೆಪಿ ಅತ್ಯಂತ ಗೋಪ್ಯತೆ ಕಾಪಾಡಿಕೊಂಡಿದೆ.

ಮೇಯರ್‌ ಸ್ಥಾನ ‘ಸಾಮಾನ್ಯ ಮಹಿಳೆ’ ಮತ್ತು ಉಪಮೇಯರ್‌ ‘ಹಿಂದುಳಿದ ವರ್ಗ ಬಿ ಮಹಿಳೆ’ಗೆ ಮೀಸಲಾಗಿದೆ.‌ 58 ವಾರ್ಡ್‌ಗಳಿಗೆ ನಡೆದ ಚುನಾವಣೆಯಲ್ಲಿ 35 ಸ್ಥಾನಗಳೊಂದಿಗೆ ಬಿಜೆಪಿ ಬಹುಮತ ಗಳಿಸಿದೆ. ಕಾಂಗ್ರೆಸ್ 10, ಎಐಎಂಐಎಂ 1 ಸ್ಥಾನ ಗೆದ್ದರೆ, 12 ವಾರ್ಡ್‌ಗಳಲ್ಲಿ ಪಕ್ಷೇತರರು ಗೆಲುವು ಸಾಧಿಸಿವೆ. ಪಕ್ಷೇತರವಾಗಿ ಗೆದ್ದ 12 ಮಂದಿಯಲ್ಲಿ ಇಬ್ಬರು ಬಿಜೆಪಿ ಪರವಾಗಿ ಮತ್ತೆ ಇಬ್ಬರು ಎಂಇಎಸ್‌ ಬೆಂಬಲಿತರಾಗಿ ನಿಂತಿದ್ದಾರೆ.

ಬಿಜೆಪಿಯೇ ದೊಡ್ಡ ಪಕ್ಷವಾದ್ದರಿಂದ ಅಧಿಕಾರ ಚುಕ್ಕಾಣಿ ಹಿಡಿಯುವುದು ನಿಚ್ಚಳವಾಗಿದೆ. ಆದರೆ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದರಿಂದ ಎಲ್ಲರೂ ಪರಸ್ಪರ ಪ್ರತಿಸ್ಪರ್ಧಿಗಳಾಗಿ ನಿಂತಿದ್ದಾರೆ.

ಬಿಜೆಪಿಯಲ್ಲಿರುವ 12 ವನಿತೆಯರ ಪೈಕಿ ವಾಣಿ ಜೋಶಿ ಹಾಗೂ ಸಾರಿಕಾ ಪಾಟೀಲ ಹೆಚ್ಚು ಉತ್ಸಾಹ ತೋರಿದ್ದಾರೆ. ನೇತ್ರಾವತಿ ಭಾಗವತ್‌, ಪ್ರೀತಿ ಕಾಮಕರ, ರೇಷ್ಮಾ ಪಾಟೀಲ ಕೂಡ ತೆರೆಮರೆಯಲ್ಲಿ ಯತ್ನ ನಡೆಸಿದ್ದಾರೆ.

ದಕ್ಷಿಣ ಕ್ಷೇತ್ರದ ಶಾಸಕ ಅಭಯ ಪಾಟೀಲ ಹಾಗೂ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರ ಮೇಲೆ ಒತ್ತಡ ಹೇರಿ ಮೇಯರ್ ಪಟ್ಟ ಗಿಟ್ಟಿಸಿಕೊಳ್ಳಲು ಎಲ್ಲರೂ ಮುಗಿಬಿದ್ದಿದ್ದಾರೆ. ಎರಡೂ ಹುದ್ದೆಗಳನ್ನು ಬಿಜೆಪಿಯವರೇ ಪಡೆಯಲಿದ್ದಾರೆ, ಆದರೆ ಯಾರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂಬುದನ್ನು ಮಾತ್ರ ನಾಯಕರು ಬಹಿರಂಗ ಮಾಡಲು ಸಿದ್ಧರಿಲ್ಲ.

ಅವಿರೋಧವಾಗಿ ಆಯ್ಕೆ ಮಾಡಲು ನಾಯಕರು ಕಸರತ್ತು ನಡೆಸಿದ್ದಾರೆ. ಆದರೆ, ಒಮ್ಮತ ಮೂಡದ ಕಾರಣ ಚುನಾವಣೆಗೆ ಹೋಗುವುದು ಅನಿವಾರ್ಯವಾಗಿದೆ ಎನ್ನುತ್ತವೆ ಮೂಲಗಳು.

ಮತದಾನ: ಫೆ. 6ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು. ಮಧ್ಯಾಹ್ನ 3ಕ್ಕೆ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. 3 ಗಂಟೆಯವರೆಗೆ ನಾಮಪತ್ರ ಹಿಂತೆಗೆದು
ಕೊಳ್ಳಲು ಅವಕಾಶವಿದೆ. ಅಗತ್ಯಬಿದ್ದಲ್ಲಿ ಮತದಾನ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

*


Spread the love

About Laxminews 24x7

Check Also

ಹೆಬ್ಬಾಳಕರ್ ಮನೆಗೆ ಭೇಟಿ ನೀಡಿ ಕೃತಜ್ಞತೆ ಸಲ್ಲಿಸಿದ ನೇಹಾ ಪೋಷಕರು

Spread the loveಬೆಳಗಾವಿ: ಮಗಳ ಹತ್ಯೆಯಾದ ಸಂದರ್ಭದಲ್ಲಿ ಮನೆಗೆ ಆಗಮಿಸಿ ಸಾಂತ್ವನ ಹೇಳಿದ್ದಲ್ಲದೆ ಸರ್ಕಾರದಿಂದ ಆಗಬೇಕಾದ ಕೆಲಸಗಳನ್ನು ಅತ್ಯಂತ ತ್ವರಿತವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ