Breaking News

ಬೋಧಕರ ಕೊರತೆ: ಹಾವೇರಿ ಹಿಮ್ಸ್‌ನ 150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

Spread the love

ಹಾವೇರಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಹೊಸದಾಗಿ ಆರಂಭವಾಗಿರುವ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌) ಕಾಲೇಜಿನಲ್ಲಿ ಬೋಧಕರ ಕೊರತೆಯಿಂದ ಒಂದೂವರೆ ತಿಂಗಳು ಕಳೆದರೂ ಪಾಠಗಳೇ ಆರಂಭವಾಗಿಲ್ಲ. ಇದರಿಂದ 150 ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

 

ಈ ಸರ್ಕಾರಿ ಮೆಡಿಕಲ್‌ ಕಾಲೇಜಿಗೆ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು ಮತ್ತು ಸಹಾಯಕ ಪ್ರಾಧ್ಯಾಪಕರು ಸೇರಿದಂತೆ ಒಟ್ಟು 79 ಮಂದಿಯನ್ನು ಕಾಯಂ ನೇಮಕಾತಿ ಮಾಡಿಕೊಳ್ಳಲು 2022ರ ಜನವರಿಯಲ್ಲಿ ಸಂದರ್ಶನ ನಡೆಸಲಾಗಿತ್ತು. ಸಂದರ್ಶನ
ದಲ್ಲಿ ಆಯ್ಕೆಯಾದವರ ತಾತ್ಕಾಲಿಕ ಪಟ್ಟಿಯನ್ನು 2022ರ ಡಿಸೆಂಬರ್‌ 9ರಂದು ಪ್ರಕಟಿಸಲಾಗಿತ್ತು. ಆಕ್ಷೇಪಣೆ ಅವಧಿ ಮುಗಿದು, ಒಂದೂವರೆ ತಿಂಗಳು ಕಳೆದರೂ ಅಂತಿಮ ಆಯ್ಕೆ ಪಟ್ಟಿಯೇ ಬಿಡುಗಡೆಯಾಗಿಲ್ಲ.

ಪ್ರಸ್ತುತ ಮೆಡಿಕಲ್‌ ಕಾಲೇಜಿನಲ್ಲಿ ಡೀನ್‌ ಮತ್ತು ಪ್ರಾಧ್ಯಾಪಕ ಸೇರಿದಂತೆ ಇಬ್ಬರು ಮಾತ್ರ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೋಧಕರ ಕೊರತೆಯಿಂದ ವಿದ್ಯಾರ್ಥಿಗಳಿಗೆ ‘ಪಠ್ಯ’ ಆರಂಭವಾಗಿಲ್ಲ. ಆರಂಭದಲ್ಲಿ 15 ದಿನ ‘ಫೌಂಡೇಷನ್‌ ಕೋರ್ಸ್‌’ ಅನ್ನು ಹಾವೇರಿ ಜಿಲ್ಲಾಸ್ಪತ್ರೆ ಮತ್ತು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯ ತಜ್ಞ ವೈದ್ಯರಿಂದ ಮಾಡಿಸಲಾಗಿದೆ

ಪೂರ್ವಸಿದ್ಧತೆಯ ಕೊರತೆ: ‘ನಮ್ಮ ಮಕ್ಕಳು ‘ನೀಟ್‌’ನಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ, ಹಾವೇರಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಆಯ್ಕೆ ಮಾಡಿಕೊಂಡು ಪ್ರವೇಶಾತಿ ಪಡೆದಿದ್ದಾರೆ. ಬೋಧಿಸಲು ಉಪನ್ಯಾಸಕರಿಲ್ಲದ ಕಾರಣ ವಿದ್ಯಾರ್ಥಿ
ಗಳು ತರಗತಿಗಳಿಗೆ ಹೋಗದೆ ಹಾಸ್ಟೆಲ್‌ನಲ್ಲಿ ಕಾಲಹರಣ ಮಾಡುವಂತಾಗಿದೆ. ಪೂರ್ವಸಿದ್ಧತೆ ಇಲ್ಲದೆ ಕಾಲೇಜು ಆರಂಭಗೊಳಿಸಿದ್ದು ಏಕೆ’ ಎಂದು ವಿದ್ಯಾರ್ಥಿಗಳ ಪೋಷಕರು ಪ್ರಶ್ನಿಸುತ್ತಿದ್ದಾರೆ.

ವ್ಯರ್ಥವಾದ 2 ತಿಂಗಳು: ‘ಮೆಡಿಕಲ್‌ ಕೋರ್ಸ್‌ನ ಮೊದಲನೇ ವರ್ಷದ ಅವಧಿಯನ್ನು ಈ ಬಾರಿ 13 ತಿಂಗಳಿಗೆ ಸೀಮಿತಗೊಳಿಸಲಾಗಿದೆ. ಈಗಾಗಲೇ ಶೈಕ್ಷಣಿಕ ಅವಧಿಯ ಎರಡು ತಿಂಗಳು ವ್ಯರ್ಥವಾಗಿ ಹೋಗಿದೆ. ಬೇರೆ

ಜಿಲ್ಲೆಗಳ ಮೆಡಿಕಲ್‌ ಕಾಲೇಜುಗಳಲ್ಲಿ ಪಾಠ ಚೆನ್ನಾಗಿ ನಡೆಯುತ್ತಿವೆ. ವೈದ್ಯರಾಗಬೇಕು ಎಂದು ಕನಸು ಹೊತ್ತು ಬಂದಿರುವ ನಮಗೆ ಹಾವೇರಿ ಮೆಡಿಕಲ್‌ ಕಾಲೇಜಿನ ಅವ್ಯವಸ್ಥೆಯಿಂದ ನಿರಾಸೆಯಾಗಿದೆ. ಭವಿಷ್ಯದ ಬಗ್ಗೆ ಆತಂಕ ಕಾಡುತ್ತಿದೆ’ ಎಂದು ವಿದ್ಯಾರ್ಥಿಗಳು 


Spread the love

About Laxminews 24x7

Check Also

ಕೇರಳ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶ ಪ್ರಶ್ನಿಸಿ ಮೇಲ್ಮನವಿ: ಕೇಂದ್ರಕ್ಕೆ ಹೈಕೋರ್ಟ್ ನೋಟಿಸ್‌

Spread the love ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರ ಪುತ್ರಿ ಟಿ.ವೀಣಾ ಅವರು ನಿರ್ದೇಶಕಿಯಾಗಿರುವ ಎಕ್ಸಲಾಜಿಕ್‌ ಸಲ್ಯೂಷನ್‌ ಪ್ರೈವೇಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ