Breaking News

ರೀಲ್ಸ್‌ನಲ್ಲಿ ಪರಿಚಯವಾದವನ ಜತೆ ಪತ್ನಿ ಪರಾರಿ

Spread the love

ಬೆಂಗಳೂರು: ಇತ್ತೀಚೆಗೆ ಚಿಕ್ಕಮಕ್ಕಳಿಂದ ವೃದ್ಧವರೆಗಿನ ಎಲ್ಲ ವಯಸ್ಸಿನವರು ರೀಲ್ಸ್‌ (ಮನರಂಜನೆ ಮೊಬೈಲ್‌ ಆಯಪ್‌)ನಲ್ಲಿ ಹೆಚ್ಚು ಸಕ್ರಿಯವಾಗಿದ್ದಾರೆ. ಆದರೆ, ಇಲ್ಲೊಂದು ಪ್ರಕರಣದಲ್ಲಿ ಮಹಿಳೆ ಪತಿಯನ್ನು ತೊರೆದು ರೀಲ್ಸ್‌ನಲ್ಲಿ ಪರಿಚಯವಾದ ವ್ಯಕ್ತಿ ಜತೆ ನಾಪತ್ತೆಯಾಗಿರುವ ಪ್ರಸಂಗ ಬೆಳಕಿಗೆ ಬಂದಿದೆ.

 

ಈ ಘಟನೆಯಿಂದ ವಿಚಲಿತಗೊಂಡಿರುವ ಪತಿ, ಸುಬೇದಾರಪಾಳ್ಯ ನಿವಾಸಿ ಜೋಸೆಫ್ ಆಂಟೋನಿ ಎಂಬುವರು ಪತ್ನಿ ನಮಿತಾ ಕುಮಾರಿ ಮತ್ತು ನಾಲ್ಕು ವರ್ಷದ ಮಗನನ್ನು ಹುಡುಕಿಕೊಡುವಂತೆ ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸಿಸಿ ಕ್ಯಾಮೆರಾ ಅಳವಡಿಕೆ ಹಾಗೂ ಎಲೆಕ್ಟ್ರೀಷಿಯನ್‌ ಕೆಲಸ ಮಾಡುವ ಜೋಸೆಫ್ ಆಂಟೋನಿ 9 ವರ್ಷಗಳ ಹಿಂದೆ ಜಾರ್ಖಂಡ್‌ ಮೂಲದ ನಮೀತಾ ಕುಮಾರಿ ಜತೆ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. ಈ ಮಧ್ಯೆ ನಮೀತಾ ಕುಮಾರಿ ಮೊಬೈಲ್‌ ಆಯಪ್‌ಗಳ ಮೂಲಕ ರೀಲ್ಸ್‌ನಲ್ಲಿ ಹಾಡು, ಕುಣಿತದ ಹವ್ಯಾಸ ಇಟ್ಟುಕೊಂಡಿದ್ದರು. ಇದೇ ವೇಳೆ ಆರು ತಿಂಗಳ ಹಿಂದೆ ದೆಹಲಿ ಮೂಲದ ದೀಪಕ್‌ ಮೊಹರಾ ಎಂಬಾತನ ಪರಿಚಯವಾಗಿದೆ. ನಂತರ ಇಬ್ಬರು ವಾಟ್ಸ್‌ಆಯಪ್‌ ಚಾಟಿಂಗ್‌ ಹಾಗೂ ವಿಡಿಯೋ ಕಾಲ್‌ನಲ್ಲಿ ಕಾಲ ಕಳೆಯುತ್ತಿದ್ದರು. ಅಲ್ಲದೆ, ಜ.8ರಂದು ದೀಪಕ್‌ ಮೇಹರಾ ಬೆಂಗಳೂರಿಗೆ ಬಂದು ನಮೀತಾ ಕುಮಾರಿಯನ್ನು ಭೇಟಿಯಾಗಿ ಹೋಗಿದ್ದ. ಈ ವಿಚಾರ ತಿಳಿದ ಜೋಸೆಫ್ ಪತ್ನಿಗೆ ಬುದ್ಧಿವಾದ ಹೇಳಿದ್ದರು ಎಂದು ಪೊಲೀಸರು ಹೇಳಿದರು.

 


Spread the love

About Laxminews 24x7

Check Also

2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ*

Spread the love 2000 ಕೋಟಿ ವೆಚ್ಚದ ಅಭಿವೃದ್ಧಿ ಕೆಲಸಗಳನ್ನು ಹಣವಿಲ್ಲದೆ ಮಾಡಲು ಸಾಧ್ಯವೇ ?: ಮುಖ್ಯಮಂತ್ರಿ ಸಿದ್ದರಾಮಯ್ಯ ಚಿಕ್ಕಬಳ್ಳಾಪುರ(ಶಿಡ್ಲಘಟ್ಟ), …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ