Breaking News

ಕೆ. ಸೋಮಶೇಖರ್‌ ಅವರು ಸಿದ್ಧಪಡಿಸಿರುವ ನಾಡದೇವಿ ಚಿತ್ರ ಅಧಿಕೃತ

Spread the love

ಬೆಂಗಳೂರು: ಚಿತ್ರ ಕಲಾವಿದ ಕೆ. ಸೋಮಶೇಖರ್‌ ಅವರು ಸಿದ್ಧಪಡಿಸಿರುವ ‘ನಾಡದೇವಿ’ಯ ಚಿತ್ರವನ್ನು ಅಧಿಕೃತವೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

ನಾಡದೇವಿ ಚಿತ್ರವನ್ನು ಆಯ್ಕೆ ಮಾಡುವ ಸಂಬಂಧ ಈ ಹಿಂದೆ ಲಲಿತ ಕಲಾ ಅಕಾಡೆಮಿ ಅಧ್ಯಕ್ಷರಾಗಿದ್ದ ಡಿ.

ಮಹೇಂದ್ರ ಅಧ್ಯಕ್ಷತೆಯಯಲ್ಲಿ ಸಮಿತಿ ರಚಿಸಲಾಗಿತ್ತು. ರಾಜ್ಯದ ಸಾಂಪ್ರದಾಯಿಕ ಕಲೆ ಹಾಗೂ ನಾಡಗೀತೆಯಲ್ಲಿರುವ ಕೆಲವು ಅಂಶಗಳನ್ನು ಸಾಂಕೇತಿಕವಾಗಿ ಬಿಂಬಿಸುವ, ಸೋಮಶೇಖರ್‌ ಅವರು ರಚಿಸಿದ ‘ನಾಡದೇವಿ’ಯ ಚಿತ್ರವನ್ನು ಅಧಿಕೃತಗೊಳಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಈ ಶಿಫಾರಸಿಗೆ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

ಕೆ. ಸೋಮಶೇಖರ್‌ ಅವರು ಸಿದ್ಧಪಡಿಸಿರುವ ನಾಡದೇವಿ ಚಿತ್ರ ಅಧಿಕೃತ

ಅಧಿಕೃತಗೊಳಿಸಿರುವ ನಾಡದೇವಿ ಚಿತ್ರದ ಹಿಂದೆ ಕರ್ನಾಟಕದ ನಕ್ಷೆ ಹಾಗೂ ಬಾವುಟ ಇದೆ. ಕಾಲಿಗೆ ಆಸರೆಯಾಗಿ ಕೆಳಗೆ ತಾವರೆ (ಕಮಲ) ಹೂವು ಇದೆ.


Spread the love

About Laxminews 24x7

Check Also

ಸಿದ್ದರಾಮಯ್ಯ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್

Spread the loveಬೆಂಗಳೂರು: ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಧನ್ಯವಾದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ