Breaking News

ಬಹಿರಂಗವಾಯಿತು ಹಿರಿಯ ಗಾಯಕಿ ವಾಣಿ ಜಯರಾಂ ಸಾವಿನ ಕಾರಣ!

Spread the love

ಹಿರಿಯ ಗಾಯಕಿ ವಾಣಿ ಜಯರಾಂ ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದರು. ಅವರ ನಿಧನ ಅನೇಕ ಅನುಮಾನಗಳನ್ನು ಹುಟ್ಟು ಹಾಕಿವೆ.
ಮನೆಯಲ್ಲಿ ಏಕಾಂಗಿಯಾಗಿ ವಾಸವಿದ್ದ ಅವರ ಹಣೆಯ ಮೇಲೆ ಗಾಯವಾಗಿದ್ದೂ ಕೂಡ ಸಾವಿನ ಬಗ್ಗೆ ಅನುಮಾನ ಹುಟ್ಟುವಂತೆ ಮಾಡಿತ್ತು.

 

ಹಿರಿಯ ಗಾಯಕಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ, ಶವವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದರು. ಭಾನುವಾರ ಅವರ ಮರಣೋತ್ತರ ಪರೀಕ್ಷೆಯ ವಿವರ ಬಹಿರಂಗವಾಗಿದ್ದು, ಜೊತೆಗೆ ಅದರೊಂದಿಗೆ ಮನೆಯ ಹಾಗೂ ಅಕ್ಕಪಕ್ಕದ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿದ ಪೊಲೀಸರು ಹಿರಿಯ ಗಾಯಕಿ ಸಾವಿನ ಕೇಸ್‌ ಕುರಿತು ಸ್ಪಷ್ಟ ನಿಲುವು ತೆಗೆದುಕೊಂಡಿದ್ದಾರೆ.

ವಾಣಿ ಜಯರಾಮ್ ಅವರ ಸಾವಿನಲ್ಲಿ ಯಾವುದೇ ಅನುಮಾನವಿಲ್ಲ ಎಂದು ಪೋಸ್ಟ್ ಮಾರ್ಟೆಮ್‌ ವರದಿ ತಿಳಿಸಿದೆ. ಅವರು ತಮ್ಮ ಹಾಸಿಗೆಯ ಬಳಿ ಹಳೆಯ ಮರದ ಮೇಜಿನ ಮೇಲೆ ಜಾರಿ ಬಿದ್ದಿದ್ದರು. ಮೇಜಿನ ಮೇಲೂ ರಕ್ತದ ಕಲೆ ಇತ್ತು. ಟೇಬಲ್ 2 ಅಡಿ ಎತ್ತರವಿದೆ. ಮೇಜಿಗೆ ಬಿದ್ದ ನಂತರ ಅವರ ಹಣೆಯಿಂದ ಭಾರೀ ರಕ್ತಸ್ರಾವವಾಗಿದೆ. ಅವರ ಹಣೆಯ ಮೇಲೆ ಗಾಯವಾಗಿದ್ದೂ ಕಾಣುತ್ತಿತ್ತು. ಸಿಸಿಟಿವಿಯನ್ನು ವೀಕ್ಷಿಸಿದಾಗ ಆಕೆಯ ಮನೆಗೆ ಹೊರಗಿನವರು ಯಾರೂ ಬಂದಿರಲಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಅವರ ಮನೆಯ ಕೆಲಸದ ಹೆಂಗಸು ಮಲರ್‌ಕೋಡಿ ಸಾಕಷ್ಟು ಬಾರಿ ಮನೆಯ ಬೆಲ್‌ ಬಾರಿಸಿದರೂ, ವಾಣಿ ಜಯರಾಮ್‌ ಬಾಗಿಲು ತೆಗೆಯದ ಕಾರಣ, ಅವರ ಸಂಬಂಧಿಗಳು ಹಾಗೂ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೊನೆಗೆ ಬದಲಿ ಕೀ ಬಳಸಿ ಮನೆಯ ಬಾಗಿಲು ತೆಗೆದಾಗ, ವಾಣಿ ಜಯರಾಮ್‌ ರಕ್ತದ ಮಡುವಿನಲ್ಲಿ ಬಿದ್ದಿರುವುದು ಗೊತ್ತಾಗಿತ್ತು.


Spread the love

About Laxminews 24x7

Check Also

ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

Spread the love ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ಕಲಬುರಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ