Breaking News

ಮಲಗಿದ್ದ ಮಗುವನ್ನ ಹೊತ್ತೊಯ್ದು ತಿಂದ ಚಿರತೆ – ಅರ್ಧ ದೇಹ ಪತ್ತೆ

Spread the love

ರಾಮನಗರ: ಪೋಷಕರ ಬಳಿ ಮಲಗಿದ್ದ ಮಗುವನ್ನು ಚಿರತೆಯೊಂದು ಹೊತ್ತೊಯ್ದು ಅರ್ಧ ಚಿಂದು ಸಾಯಿಸಿರುವ ಅಮಾನವೀಯ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಕದಿರಯ್ಯನಪಾಳ್ಯದಲ್ಲಿ ನಡೆದಿದೆ.

ಮೂರು ವರ್ಷದ ಹೇಮಂತ್‍ನನ್ನು ಚಿರತೆ ತಿಂದು ಸಾಯಿಸಿದೆ. ಹೇಮಂತ್ ತನ್ನ ತಾತನ ಮನೆಗೆ ಬಂದಿದ್ದ ಸಂದರ್ಭದಲ್ಲಿ ಇಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿದೆ. ಮನೆ ಸಮೀಪದ ಕಾಡಿನಲ್ಲಿ ಮಗುವನ್ನು ತಿಂದು ಹೋಗಿದೆ. ಇದೀಗ ಮಗುವಿನ ಅರ್ಧ ದೇಹ ಪತ್ತೆಯಾಗಿದೆ.

ಮೃತ ಹೇಮಂತ್ ದೊಡ್ಡೇರಿ ಗ್ರಾಮದ ಚಂದ್ರಶೇಖರ್ ಮತ್ತು ಮಂಗಳ ದಂಪತಿಯ ಮಗುವಾಗಿದೆ. ಶುಕ್ರವಾರ ರಾತ್ರಿ ಮನೆಯಲ್ಲಿ ಹೇಮಂತ್ ತಂದೆ-ತಾಯಿಯ ಜೊತೆ ಮಲಗಿದ್ದನು. ಆದರೆ ಪೋಷಕರು ಸೆಕೆ ಹೆಚ್ಚಾಗಿದ್ದರಿಂದ ಬಾಗಿಲನ್ನ ತೆಗೆದು ಮಲಗಿದ್ದರು. ಈ ವೇಳೆ ಬಂದ ಚಿರತೆ ಮಲಗಿದ್ದ ಮಗುವನ್ನ ಹೊತ್ತೊಯ್ದಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ದೌಡಾಯಿಸಿದ್ದಾರೆ. ಬಳಿಕ ಮಗುವಿಗಾಗಿ ಹುಡುಕಾಟ ಶುರುಮಾಡಿದ್ದಾರೆ. ಆದರೆ ಮಗುವಿನ ಅರ್ಧ ದೇಹ ಮನೆ ಬಳಿ ಇರುವ ಕಾಡಿನಲ್ಲಿ ಪತ್ತೆಯಾಗಿದೆ.

ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ