Breaking News

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳ

Spread the love

ಮುಂಬೈ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ, ಸಾಲಗಾರರಿಗೆ ಮತ್ತೆ ಶಾಕ್ ನೀಡಿದೆ. ರೆಪೊ ದರವನ್ನು ಹೆಚ್ಚಳ ಮಾಡಿದ್ದು, ಬ್ಯಾಂಕ್ ಸಾಲದ ಬಡ್ಡಿದರದಲ್ಲಿ ಏರಿಕೆಯಾಗಲಿದೆ.

ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್, ಆರ್ ಬಿಐ ರೆಪೊ ದರವನ್ನು 25 ಮೂಲಾಂಶದಷ್ಟು ಹೆಚ್ಚಿಸಿದೆ. ಈ ಮೂಲಕ ಪರಿಷ್ಕೃತ ರೆಪೊದರ ಶೇ.6.50ರಷ್ಟಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ಹಣಕಾಸು ನೀತಿಯಲ್ಲಿ ಆರ್ ಬಿ ಐ ತನ್ನ ರೆಪೊ ದರವನ್ನು ಹೆಚ್ಚಿಸುತ್ತಾ ಬಂದಿದ್ದು, 23ನೇ ಹಣಕಾಸು ವರ್ಷದಲ್ಲಿ 250 ಮೂಲಾಂಶದಷ್ಟು ರೆಪೊ ದರ ಹೆಚ್ಚಳವಾಗಿದೆ.

ದೇಶದ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಹಣದುಬ್ಬರದ ವಿಚಾರದಲ್ಲಿ ನಮ್ಮ ಗುರಿ ತಲುಪಲು ದರ ಹೆಚ್ಚಿಸುವುದು ಸದ್ಯದ ಮಟ್ಟಿಗೆ ಅನಿವಾರ್ಯವಾಗಿದೆ. ಹಾಗಾಗಿ ರೆಪೊ ದರ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ರೆಪೊ ದರ ಹೆಚ್ಚಳದಿಂದಾಗಿ ಗೃಹ ಸಾಲ, ವಾಹನ ಸಾಲ, ವೈಯಕ್ತಿಕ ಸಾಲದ ಮೇಲೆ ಬಡ್ಡಿದರ ಹೆಚ್ಚಳವಾಗಲಿದೆ.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

Spread the loveಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ