ಕಾರವಾರ/ಗೋಕರ್ಣ: ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ. ನನ್ನ ಮಾತನ್ನು ಅಪಾರ್ಥ ಮಾಡಿಕೊಳ್ಳಲಾಗಿದೆ.
ಮುಖ್ಯಮಂತ್ರಿಯಾಗಿದ್ದಾಗ ಬ್ರಾಹ್ಮಣ ಸಮುದಾಯ ಭವನ ನಿರ್ಮಾಣಕ್ಕೆ ಜಾಗ ಕೊಟ್ಟಿದ್ದೇನೆ. ಬ್ರಾಹ್ಮಣ ಅಭಿವೃದ್ಧಿ ಪ್ರಾಧಿ ಕಾರ ರಚನೆ ಮಾಡಿದ್ದೇನೆ.
ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ನಮಗೆ ಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಪಂಚರತ್ನ ಯಾತ್ರೆ ಹಿನ್ನೆಲೆಯಲ್ಲಿ ಕುಮಟಾದಿಂದ ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣ ಮಹಾಬಲೇಶ್ವರ ದೇಸವಸ್ಥಾನಕ್ಕೆ ಭೇಟಿ ನೀಡಿದರು.
ಈ ವೇಳೆ ದೇವಸ್ಥಾನದ ಅರ್ಚಕರು ನಿಮ್ಮ ಹೇಳಿಕೆಯಿಂದ ಬೇಸರವಾಗಿದ್ದು ನಿಮ್ಮ ಕುಟುಂಬದ ಮೇಲೆ ನಮಗೆ ಅಭಿಮಾನವಿದೆ. ಗೋಕರ್ಣದಲ್ಲೇ ನೀವು ಸ್ಪಷ್ಟೀಕರಣ ನೀಡಬೇಕು ಎಂದು ಕೇಳಿದರು.
ಆಗ ಮಾತನಾಡಿದ ಕುಮಾರಸ್ವಾಮಿ, ಹಿಂದೂ ಧರ್ಮವನ್ನು ನಾವು ರಕ್ಷಣೆ ಮಾಡುತ್ತೇವೆ. ಹಿಂದೂ ಹೆಸರಲ್ಲಿ ಅಧಿಕಾರಕ್ಕೆ ಬಂದು ಈಗ ಅ ಧಿಕಾರದಲ್ಲಿ ಇರೋರು ಏನು ಮಾಡಿದ್ದಾರೆ ಗೊತ್ತಿದೆ.
ಬ್ರಾಹ್ಮಣ ಸಮುದಾಯಕ್ಕೆ ಬಿಜೆಪಿ ಏನೂ ಮಾಡಿಲ್ಲ. ನಮಗೆ ಸಾವರ್ಕರ್ ಸಂಸ್ಕೃತಿ ಬೇಡ. ಸರ್ವೇ ಜನಃ ಸುಖಿನೋ ಭವಂತು ಎನ್ನುವ ಬ್ರಾಹ್ಮಣರು ಬೇಕು ಎಂದರು.
Laxmi News 24×7