Home / Uncategorized / ಡಬ್ಬಲ್‌ ಎಂಜಿನ್‌ ಸರ್ಕಾರದಿಂದ ಮಹಾಮೋಸ:H.D.K.

ಡಬ್ಬಲ್‌ ಎಂಜಿನ್‌ ಸರ್ಕಾರದಿಂದ ಮಹಾಮೋಸ:H.D.K.

Spread the love

ಬೆಂಗಳೂರು: ‘ತೆರಿಗೆ ಸಂಗ್ರಹದಲ್ಲಿ ಕರ್ನಾಟಕವನ್ನು ತನ್ನ ಎಟಿಎಂ ಯಂತ್ರವನ್ನಾಗಿ ಮಾಡಿಕೊಂಡಿರುವ ಬಿಜೆಪಿಯ ಡಬ್ಬಲ್‌ ಎಂಜಿನ್‌ ಸರ್ಕಾರ, ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಮಹಾಮೋಸ ಮಾಡಿರುವುದು ಬಯಲಾಗಿದೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.

ಕುಮಾರಸ್ವಾಮಿ ಟೀಕಿಸಿದ್ದಾರೆ.

‘ಪ್ರಜಾವಾಣಿ’ಯ ಬುಧವಾರದ ಸಂಚಿಕೆಯ ಮುಖಪುಟದಲ್ಲಿ ‘ವಿಶೇಷ ಅನುದಾನ: ರಾಜ್ಯಕ್ಕೆ ಸೊನ್ನೆ’ ಶೀರ್ಷಿಕೆಯಡಿ ಪ್ರಕಟವಾಗಿದ್ದ ವಿಶೇಷ ವರದಿಯ ತುಣುಕಿನೊಂದಿಗೆ ಸರಣಿ ಟ್ವೀಟ್‌ ಮಾಡಿರುವ ಅವರು, ‘ಚುನಾವಣೆ ವರ್ಷದಲ್ಲಿ ತಿಂಗಳಿಗೆ ನಾಲ್ಕು ಬಾರಿ ರಾಜ್ಯಕ್ಕೆ ಬರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಕನ್ನಡಿಗರನ್ನು ಎಷ್ಟು ಕೀಳಾಗಿ ನಡೆಸಿಕೊಳ್ಳುತ್ತಿದೆ ಎಂಬುದಕ್ಕೆ ಇದು ಸಾಕ್ಷಿ’ ಎಂದಿದ್ದಾರೆ.

‘ತೆರಿಗೆ ಕಟ್ಟಲು ದಕ್ಷಿಣ ಭಾರತ, ಅನುದಾನ ಹಂಚಿಕೆಗೆ ಉತ್ತರ ಭಾರತ ಎಂಬುದು ಇವರ ರಾಜನೀತಿ. ಐದು ವರ್ಷಗಳ ಅವಧಿಯಲ್ಲಿ ಉತ್ತರ ಮತ್ತು ದಕ್ಷಿಣದ ರಾಜ್ಯಗಳಿಗೆ ನೀಡಿದ ಅನುದಾನದ ಅಂಕಿಅಂಶಗಳನ್ನು ಲೋಕಸಭೆಯಲ್ಲಿ ಮಂಡಿಸಿದ ಸಚಿವರಿಗೆ ಕೊಂಚವೂ ಲಜ್ಜೆ ಎನಿಸಲಿಲ್ಲವೆ? ಕನ್ನಡಿಗರು ಬಿಜೆಪಿಯವರಿಗೆ ತಬ್ಬಲಿ ಮಕ್ಕಳೇ ಆಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

BJP ಗೆದ್ದರೆ 5 ಲಕ್ಷ ಜನರಿಗೆ ಅಯೋಧ್ಯೆ ರಾಮನ ದರ್ಶನ

Spread the love ಮಾಲ್ಕನ್‌ಗಿರಿ: ಒಡಿಶಾದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ 5 ಲಕ್ಷ ಜನರಿಗೆ ಅಯೋಧ್ಯೆಯ ರಾಮ ಮಂದಿರದ ದರ್ಶನ ಒದಗಿಸಲಾಗುವುದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ