Home / ರಾಜಕೀಯ / ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ

ನಾಳೆಯಿಂದ ವಿಧಾನ ಮಂಡಲ ಬಜೆಟ್ ಅಧಿವೇಶನ, ಎಲ್ಲರೂ ಕಡ್ಡಾಯವಾಗಿ ಭಾಗವಹಿಸಿ: ಶಾಸಕರಿಗೆ ಸ್ಪೀಕರ್ ಕಾಗೇರಿ ಮನವಿ

Spread the love

ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಬಜೆಟ್ ಮಂಡನೆ ಇರುವುದರಿಂದ ಶುಕ್ರವಾರ (ಫೆ. 10)ದಿಂದ ಅಧಿವೇಶನ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಭಾಗವಹಿಸಬೇಕೆಂದು ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಗುರುವಾರ ಮನವಿ ಮಾಡಿಕೊಂಡಿದ್ದಾರೆ.
ಅಧಿವೇಶನ ಕುರಿತು ಇಂದು ಮಾಹಿತಿ ನೀಡಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರು, ಇದು ಈ ವಿಧಾನಸಭೆಯ 15ನೆಯ ಮತ್ತು ಕೊನೆಯ ಅಧಿವೇಶನ ಆಗಿರುತ್ತದೆ. ಅಧಿವೇಶನದಲ್ಲಿ ಎಲ್ಲರೂ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ಕೊನೆಯ ಅಧಿವೇಶನ ಎಂದು ಯಾರೂ ನಿರ್ಲಕ್ಷಿಸದೇ ಪಾಲ್ಗೊಳ್ಳಿ ಎಂದು ಮನವಿ ಮಾಡಿಕೊಂಡರು. ಬೆಳಗಾವಿಯಲ್ಲಿ ಕಳೆದ ಅಧಿವೇಶನ ನಡೆದಿತ್ತು.

ಅದಾದ ಬಳಿಕ ಈಗ ವಿಧಾನಸೌಧದಲ್ಲಿ ಸೇರುತ್ತಿದ್ದೇವೆ. ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುವ ಸದನ ಇದು. ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಯಸುತ್ತೇನೆಂದು ಹೇಳಿದರು. ಫೆಬ್ರುವರಿ 10ರಂದು ಆರಂಭವಾಗುವ ಅಧಿವೇಶನ ಫೆ.

24ರವರೆಗೆ ನಡೆಯಲಿದೆ. ಇದು ಬಜೆಟ್ ಅಧಿವೇಶನವಾಗಿದ್ದು, ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ಫೆಬ್ರುವರಿ 20ರಿಂದ 24ರವರೆಗೂ ಬಜೆಟ್ ಮೇಲೆ ಚರ್ಚೆ ನಡೆಯಲಿದೆ. ಅಧಿವೇಶನ ಆರಂಭವಾಗುವ ನಾಳೆ 11 ಗಂಟೆಗೆ ರಾಜ್ಯಪಾಲರು ಬೃಹತ್ ಮೆಟ್ಟಿಲುಗಳ ಮೂಲಕ ವಿಧಾನಸಭೆಗೆ ಆಗಮಿಸಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆಂದು ತಿಳಿಸಿದರು.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ