Breaking News

ಬಳ್ಳಾರಿಯಲ್ಲಿ 20 ಜನರ ಮೇಲೆ ಬೀದಿ ನಾಯಿ ದಾಳಿ, ನಾಲ್ವರು ಐಸಿಯುಗೆ ದಾಖಲು

Spread the love

ಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ. ಬಳ್ಳಾರಿ: ಬಳ್ಳಾರಿಯಲ್ಲಿ ರೇಬಿಸ್ ಸೋಂಕಿತ ನಾಯಿಯೊಂದು ಎರಡು ಮಕ್ಕಳನ್ನು ಮಾರಣಾಂತಿಕವಾಗಿ ಕಚ್ಚಿದ ಎರಡು ತಿಂಗಳ ನಂತರ, ಬೀದಿ ನಾಯಿಗಳ ಗುಂಪೊಂದು ನಗರದ ಮೂರು ವಿವಿಧ ಸ್ಥಳಗಳಲ್ಲಿ 20 ಜನರ ಮೇಲೆ ದಾಳಿ ಮಾಡಿದೆ.

ನಾಯಿ ಕಚ್ಚಿದ ನಾಲ್ಕು ಮಂದಿಯನ್ನು ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ವಿಮ್ಸ್) ಐಸಿಯು ವಾರ್ಡ್ಗೆ ದಾಖಲಿಸಲಾಗಿದೆ. 20 ರಲ್ಲಿ ಏಳು ಮಕ್ಕಳು ಸೇರಿವೆ. ಸ್ಥಳೀಯ ನಿವಾಸಿಗಳ ಪ್ರಕಾರ, ನಾಯಿಗಳಿಗೆ ರೇಬಿಸ್ ಲಕ್ಷಣಗಳು ಕಂಡುಬಂದಿದೆ ಎನ್ನಲಾಗಿದೆ. ಆದರೆ ನಿಗಮದ ಅಧಿಕಾರಿಗಳು ಅದನ್ನು ನಿರಾಕರಿಸಿದ್ದಾರೆ.

ರೇಬಿಸ್ ಲಕ್ಷಣ ಹೊಂದಿರುವ ಮೂರು ನಾಯಿಗಳು ಏಕಾಏಕಿ ಜನರ ಮೇಲೆ ದಾಳಿ ನಡೆಸಿವೆ ಎಂದು ನಾಯಿಯಿಂದ ಕಚ್ಚಿಸಿಕೊಂಡ ಮನುಜತ್ ನಾಯಕ್ ತಿಳಿಸಿದ್ದಾರೆ. ವಾರ್ಡ್ ಸಂಖ್ಯೆ 30ರವಟ್ಟಪ್ಪಗೇರಿಯ ಪ್ರದೇಶದಲ್ಲಿ ರೇಬೀಸ್ ಸೋಂಕಿತ ನಾಯಿಯೊಂದು ತಿರುಗಾಡುತ್ತಿರುವುದು ಕಂಡುಬಂದಿದೆ. ನಾವು ನಗರ ಪಾಲಿಕೆಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರೂ ಅವರು ಗಮನ ಹರಿಸಲಿಲ್ಲ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈಗ ನಾವು ತೊಂದರೆ ಅನುಭವಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

ಬಳ್ಳಾರಿ ನಗರದಲ್ಲಿ ಬೀದಿ ನಾಯಿ ಕಡಿತ ಪ್ರಕರಣಗಳು ಸಾಮಾನ್ಯವಾಗಿದೆ ಎಂದು ಹ್ಯೂಮನ್ ವರ್ಲ್ಡ್ ಫಾರ್ ಅನಿಮಲ್, ಬಳ್ಳಾರಿಯ ಸಂಸ್ಥಾಪಕಿ ನಿಕಿತಾ ಹೇಳಿದ್ದಾರೆ. “ಕಳೆದ ಆರು ತಿಂಗಳಿನಿಂದ, ಅನಿಮಲ್ ಬರ್ತ್ ಕಂಟ್ರೋಲ್ (ಎಬಿಸಿ) ಮತ್ತು ಆಂಟಿ ರೇಬೀಸ್ ಲಸಿಕೆ (ಎಆರ್ವಿ) ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಬೀದಿ ನಾಯಿಗಳ ಹಾವಳಿ ಹೆಚ್ಚಾಗಲು ಇದೂ ಒಂದು ಕಾರಣ. ರೇಬಿಸ್ ಸೋಂಕಿತ ನಾಯಿಗಳ ಸಂಖ್ಯೆಯೂ ಹೆಚ್ಚುತ್ತಿದೆ ಎಂದು ನಿಕಿತಾ ಹೇಳಿದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ