Breaking News

ಹುಬ್ಬಳ್ಳಿ: ಟ್ಯಾಂಕರ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರ ದುರ್ಮರಣ!

Spread the love

ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ. ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಟಿಕೊಪ್ಪ ಗ್ರಾಮದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಮೂವರು ಸ್ನೇಹಿತರು ಸಾವನ್ನಪ್ಪಿದ್ದಾರೆ.
ಕಾರಿಗೆ ಟ್ಯಾಂಕರ್​ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಹುಬ್ಬಳ್ಳಿ ನಗರದ ನಿವಾಸಿಗಳಾದ ಮೊಹಮ್ಮದ್ ಇಶಾನ್, ಮೊಹಮ್ಮದ್ ಸೈಫ್ ಹಾಗೂ ಇಸ್ಮಾಯಿಲ್ ಎಂದು ಗುರುತಿಸಲಾಗಿದೆ.
ಈ ವೇಳೆ ಕಲಘಟಗಿ ಬಳಿ ಅಪಘಾತ ಸಂಭವಿಸಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಕಿಮ್ಸ್ ಆಸ್ಪತ್ರೆಯಲ್ಲಿ ಓರ್ವ ಸಾವನ್ನಪ್ಪಿದ್ದಾನೆ. ಕಲಘಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ