ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು: ನಗರದಲ್ಲಿ ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ಹಾವಳಿ ಅವ್ಯಾಹತವಾಗಿ ಮುಂದುವರಿದಿದ್ದು, ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಂದ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಫ್ಲೆಕ್ಸ್ಗಳು ಮತ್ತು ಬ್ಯಾನರ್ಗಳ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ತುಷಾರ್ ಗಿರಿನಾಥ್ ಅವರು, ಈ ವಾರಾಂತ್ಯದ ವೇಳೆಗೆ ಕನಿಷ್ಟ 10 ಎಫ್‌ಐಆರ್ ದಾಖಲಿಸುವಂತೆ ಪ್ರತಿ ವಲಯದ ಸಹಾಯಕ ಆಯುಕ್ತರು ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ನಾಯಕರು ಮತ್ತು ಅವರ ಬೆಂಬಲಿಗರು ಈಗಾಗಲೇ ಬ್ಯಾನರ್ಗಳಿಂದ ನಗರವನ್ನು ವಿರೂಪಗೊಳಿಸಿರುವ ಹಿನ್ನೆಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಫ್ಲೆಕ್ಸ್, ಬ್ಯಾನರ್ಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಹೀಗಾಗಿ ಅಕ್ರಮ ಬ್ಯಾನರ್ ಮತ್ತು ಪೋಸ್ಟರ್ ಗಳಿಗೆ ಸಂಬಂಧಿಸಿದಂತೆ ವಲಯವಾರು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಬಿಬಿಎಂಪಿ ಮುಖ್ಯ ಆಯುಕ್ತರು ಆಯಾ ವಲಯದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Laxmi News 24×7