ಎಸ್ ಸಿ ಎಸ್ ಟಿ ಸಮಾಜಕ್ಕೆ ನ್ಯಾಯ ದೊರಕಿಸುಕೊಡುವುದೇ ನಮ್ಮ ಸರ್ಕಾರದ ಏಕೈಕ ಗುರಿಯಾಗಿದ್ದು, ಎಸ್ ಸಿ ಎಸ್ ಟಿ ಮೀಸಲಾತಿ ಹೆಚ್ಚಳವನ್ನು9ನೇ ಶೆಡ್ಯೂಲ್ ಗೆ ಸೇರಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ನಿನ್ನೆ ‘ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವ’ ಅಂಗವಾಗಿ ‘ಜನಜಾಗೃತಿ ಜಾತ್ರಾ ಮಹೋತ್ಸವದ ಉದ್ಘಾಟನೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ’ದಲ್ಲಿ ಪಾಲ್ಗೊಂಡು ಮಾತನಾಡಿ, ನಾಗಮೋಹನ್ ದಾಸ್ ವರದಿಯಂತೆ ತುಳಿತಕ್ಕೊಳಗಾಗಿರುವ ಸಮಾಜದವರ ಪರವಾಗಿ ನ್ಯಾಯ ನೀಡಲಾಗಿದೆ.. ಎಸ್ ಸಿ ವರ್ಗಕ್ಕೆ ಶೇ. 15 ರಿಂದ ಶೇ. 17 ಮತ್ತು ಎಸ್ ಟಿ ಗೆ 3 ರಿಂದ ಶೇ. 7 ಕ್ಕೆ ಹೆಚ್ಚಿಸಲಾಗಿದೆ. ತಳಸಮುದಾಯದ ಯುವಜನತೆಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಹೆಚ್ಚಿನ ಲಾಭ ದೊರೆಯಲಿದೆ. ಈ ಹೆಚ್ಚಳಕ್ಕೆ ಕಾನೂನಿನ ರಕ್ಷಣೆಯನ್ನು ಈಗಾಗಲೇ ಸರ್ಕಾರ ನೀಡಿದೆ.. ಕೇವಲ ಭಾಷಣದಿಂದ ಸಾಮಾಜಿಕ ನ್ಯಾಯ ಸಿಗುವುದಿಲ್ಲ. ಮೀಸಲಾತಿ ಹೆಚ್ಚಳವನ್ನು ಸರ್ಕಾರ ಈಗಾಗಲೇ ಜಾರಿ ಮಾಡಿದ್ದು, ಸರ್ಕಾರದ ನೇಮಕಾತಿಗಳಲ್ಲಿ ಈ ನಿಯಮವನ್ನು ಈಗಾಗಲೇ ಪಾಲಿಸಲಾಗುತ್ತಿದೆ ಎಂದರು.
Laxmi News 24×7