Breaking News

ನನಗೆ ಆಹ್ವಾನವಿರಲಿಲ್ಲ..; ಅಭಿಮಾನಿಗಳ ಆಕ್ರೋಶಕ್ಕೆ ಕಿಚ್ಚ ಸುದೀಪ್ ಪ್ರತಿಕ್ರಿಯೆ

Spread the love

ಬೆಂಗಳೂರು : ದಾವಣಗೆರೆಯ ರಾಜನಹಳ್ಳಿಯ ಗುರುಪೀಠದ ವಾಕ್ಮೀಕಿ ಜಾತ್ರೆಗೆ ನಟ ಕಿಚ್ಚ ಸುದೀಪ್ ಬರಲಿಲ್ಲ ಎಂದು ನೂರಾರು ಅಭಿಮಾನಿಗಳು ಆಕ್ರೋಶ ಹೊರ ಹಾಕಿದ ಘಟನೆ ನಡೆದಿದೆ.

”ಸ್ನೇಹಿತರಿಗೆ ನಲ್ಮೆಯ ನಮಸ್ಕಾರ – ದಾವಣಗೆರೆಯ ಜಿಲ್ಲೆಯ ರಾಜನಹಳ್ಳಿಯ ಘಟನೆ ತಿಳಿದು ಬೇಸರವಾಯಿತು.ನನಗೆ ಕಾರ್ಯಕ್ರಮದ ಆಯೋಜಕರಿಂದ ಆಹ್ವಾನವಿರಲಿಲ್ಲ.ಕಾರ್ಯಕ್ರಮದ ಕುರಿತು ಮಾಹಿತಿಯೂ ಇರಲಿಲ್ಲ.ನಾನು ಒಪ್ಪಿಕೊಂಡ ಕಾರ್ಯಕ್ರಮಗಳನ್ನು ತಪ್ಪಿಸಿದವನಲ್ಲ.” ಎಂದು ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

 

”ನಡೆದ ಘಟನೆಯ ಬಗ್ಗೆ ತೀವ್ರ ವಿಷಾದವಿದೆ.ನಿಮ್ಮ ಜೊತೆ ಬೆರೆಯಲು ನನಗೂ ಸದಾ ಆತೀವ ಆಸೆ ..ಮುಂದೆ ಖಂಡಿತ ಬರುವೆ.ಪ್ರೀತಿ ಇರಲಿ.ಶಾಂತರೀತಿಯಿಂದ ವರ್ತಿಸಿ …ಪ್ರೀತಿಯೊಂದಿಗೆ ನಿಮ್ಮ ಕಿಚ್ಚ….” ಎಂದು ಸುದೀಪ್ ಅವರು ಟ್ವೀಟ್ ಮಾಡಿದ್ದಾರೆ.

ಆಹ್ವಾನವಿತ್ತೇ ?
ಪ್ರಸನ್ನನಾಂದ ಮಹಾಸ್ವಾಮಿಜೀಯವರು ಹಾಗೂ 2023 ರ ವಾಲ್ಮೀಕಿ ಜಾತ್ರೆಯ ಅದ್ಯಕ್ಷರು ಹಾಗೂ ಜಗಳೂರಿನ ಶಾಸಕರಾದ ಎಸ್ ವಿ.ರಾಮಚಂದ್ರಪ್ಪ .ಕಿಚ್ಚ ಸುದೀಪ್ ರವರ ಮನೆಗೆ ಭೇಟಿ ನೀಡಿ ಸುದೀಪ್ ರವರು ಬೆಂಗಳೂರಿನಲ್ಲಿ ಇಲ್ಲದ ಕಾರಣ ತಂದೆಯವರಾದ ಸಂಜೀವ್ ಸರ್ ರವರನ್ನ ಭೇಟಿ ಮಾಡಿ ಸುದೀಪ್ ನವರನ್ನ ಕರೆದುಕೊಂಡು ಬನ್ನಿ ಎಂದು ಆಹ್ವಾನಿಸಲಾಗಿತ್ತು” ಎಂದು ರಂಗನಾಥ್ ಕೆ.ಎಂ. ಎನ್ನುವವರು ಫೋಟೋಗಳ ಸಮೇತ ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ