Breaking News

ಲೋಕಾಯುಕ್ತ ಬಲೆಗೆ ಬಿದ್ದ PDO,

Spread the love

ಚಿತ್ರದುರ್ಗ: 4 ಸಾವಿರ ರೂಪಾಯಿಗೆ ಲಂಚಕ್ಕೆ ಕೈಯೊಡ್ದಿದ್ದ ಗ್ರಾಮ ಪಂಚಾಯತ್ ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಜಾನಕಲ್ ನಲ್ಲಿ ನಡೆದಿದೆ.

ಪಿಡಿಒ ಶ್ರೀನಿವಾಸ್ ಹಾಗೂ ಕಂಪ್ಯೂಟರ್ ಆಪರೇಟರ್ ಚನ್ನಬಸಪ್ಪ ಲೋಕಾಯುಕ್ತ ಬಲೆಗೆ ಬಿದ್ದವರು. ಶಾಲಾ ಕಾಂಪೌಂಡ್ ಕಾಮಗಾರಿಗಾಗಿ 4 ಸಾವಿರ ರೂಪಾಯಿ ಲಂಚ ನೀಡುವಂತೆ ಭೀಮಪ್ಪ ಎಂಬುವವರಿಗೆ ಬೇಡಿಕೆ ಇಟ್ಟಿದ್ದರು.

ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಭೀಮಪ್ಪ ಅವರಿಂದ 4 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪಿಡಿಓ ಹಾಗೂ ಕಂಪ್ಯೂಟರ್ ಆಪರೇಟರ್ ಇಬ್ಬರೂ ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ