Breaking News

ಪಂಚರತ್ನ ಯಾತ್ರೆ ಯಶಸ್ಸಿನಿಂದ ಬಿಜೆಪಿ, ಕಾಂಗ್ರೆಸ್ ಗೆ ಭಯ:H.D.K.

Spread the love

ಬೆಳಗಾವಿ: ಇದೇ ತಿಂಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಖಾನಾಪುರ ತಾಲೂಕಿನ ಕಕ್ಕೇರಿ ಗ್ರಾಮದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2ನೇ ಹಂತದಲ್ಲಿ 60 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ. ಖಾನಾಪುರ ತಾಲೂಕಿನ ಜೆಡಿಎಸ್ ಅಭ್ಯರ್ಥಿಯಾಗಲಿದ್ದ ವ್ಯಕ್ತಿ 3 ವರ್ಷಗಳ ಹಿಂದೆಯೇ ಪಕ್ಷ ಬಿಡುವ ಆಲೋಚನೆ ಮಾಡಿದ್ದು ನಾಳೆ ಹೊಸ ಅಭ್ಯರ್ಥಿ ಘೋಷಿಸಲಾಗುವುದು ಎಂದರು.

ನಾಳೆ ಅರಸಿಕೇರೆಗೆ ಬಹಿರಂಗ ಸಮಾವೇಶದಲ್ಲಿ ಭಾಗವಹಿಸಲು ತಾವು ತೆರಳುತ್ತಿದ್ದು, ಅಲ್ಲಿ ನಡೆಯಲಿರುವ ಬಹಿರಂಗ ಸಮಾವೇಶದಲ್ಲಿ ಅರಸಿಕೇರೆ ಜೆಡಿಎಸ್ ಅಭ್ಯರ್ಥಿ ಘೋಷಣೆ ಮಾಡುವುದಾಗಿ ಅವರು ತಿಳಿಸಿದರು.

“ಪಂಚರತ್ನ ಯಾತ್ರೆ ಮೂಲಕ ಎಲ್ಲ ಗ್ರಾಮಗಳಿಗೆ ತೆರಳಿ, ನಾನೇ ಜನರ ಬಳಿ ಹೋಗುವ ಪ್ರಯತ್ನ ಮಾಡುತ್ತಿದ್ದೇನೆ. ಕಳೆದ ಎರಡುವರೇ ತಿಂಗಳಿಂದ ದಿನಕ್ಕೆ 18 ಗಂಟೆ ಕೆಲಸ ಮಾಡುತ್ತಿದ್ದೇನೆ.

ಪಂಚರತ್ನ ಯಾತ್ರೆ ಯಶಸ್ಸಿನಿಂದ ಬಿಜೆಪಿ, ಕಾಂಗ್ರೆಸ್ ಗೆ ಭಯ ಶುರುವಾಗಿದೆ. ಇಂದಿನಿಂದ ಬೆಳಗಾವಿ ಜಿಲ್ಲೆಯ ಕುಡಚಿ, ರಾಯಬಾಗ, ಖಾನಾಪುರ, ಬೈಲಹೊಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ನಡೆಯಲಿದೆ” ಎಂದರು.

ಕಳಸಾ- ಬಂಡೂರಿ ಯೋಜನೆ ಕುರಿತು ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ, ಬಿಜೆಪಿಯವರು “ಈ ವಿಷಯದಲ್ಲಿ ತಾವೇನೋ ದೊಡ್ಡ ಸಾಧನೆ ಮಾಡಿದವರಂತೆ  ಸಿಹಿ ಹಂಚಿ ಸಂಭ್ರಮಿಸಿದರು.  ಆದರೆ ಇದಕ್ಕೆ ನಾನು ಮುಖ್ಯಮಂತ್ರಿಯಾಗಿದ್ದಾಗ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದೆ. ಕರ್ನಾಟಕ, ಗೋವಾ ಹಾಗೂ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಇದೆ, ಇದು ಡಬಲ್ ಎಂಜಿನ್ ಅಲ್ಲ, ತಿಬ್ರಲ್ ಎಂಜಿನ್ ಸರ್ಕಾರ. ಆದಾಗ್ಯೂ ಇನ್ನೂ ಕೆಲಸ ಏಕೆ ಆರಂಭವಾಗಿಲ್ಲ?” ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ