Breaking News

ಮಾಜಿ ಸಚಿವ ಟಿ.ಜಾನ್ ನಿಧನ

Spread the love

ಬೆಂಗಳೂರು: ಮಾಜಿ ಸಚಿವ ಟಿ.ಜಾನ್(92) ಅವರು ಇಂದಿರಾನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ನಿಧನರಾದರು.

ಜಾನ್‌ ಅವರಿಗೆ ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರು ಇದ್ದಾರೆ. ಅಂತ್ಯಕ್ರಿಯೆ ಶನಿವಾರ ಬೆಂಗಳೂರಿನಲ್ಲೇ ನಡೆಯಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

 

ಕೇರಳದಲ್ಲಿ ಜನಿಸಿದ್ದ ಇವರು, ಮಡಿಕೇರಿಯಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ಟಿ.ಜಾನ್ ಶಿಕ್ಷಣ ಸಂಸ್ಥೆ ಕಟ್ಟಿದ ಬಳಿಕ ಬೆಂಗಳೂರಿನಲ್ಲೇ ನೆಲೆ ಊರಿದರು.

ಕಾಂಗ್ರೆಸ್‌ನಿಂದ ವಿಧಾನ ಪರಿಷತ್ತಿನ ಸದಸ್ಯರಾಗಿ ಎಸ್.ಎಂ.ಕೃಷ್ಣ ನೇತೃತ್ವದ ಸಂಪುಟದಲ್ಲಿ ಮೂಲಸೌಕರ್ಯ ಮತ್ತು ವಿಮಾನಯಾನ ಖಾತೆ ಸಚಿವರೂ ಆಗಿದ್ದರು.

ಗುಜರಾತ್‌ನ ಕಛ್‌ ಜಿಲ್ಲೆಯಲ್ಲಿ 2001ರಲ್ಲಿ ಭೂಕಂಪ ಸಂಭವಿಸಿ, ಅಪಾರ ಹಾನಿಯಾಗಿತ್ತು. ಆ ಸಂದರ್ಭದಲ್ಲಿ ‘ಅದು ಏಸುಕ್ರಿಸ್ತ ಕೊಟ್ಟ ಶಾಪ’ ಎಂಬರ್ಥದ ಹೇಳಿಕೆ ನೀಡಿದ್ದರು. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ