Breaking News

K,S,R,T,C ನೇಮಕಾತಿ : ಅಭ್ಯರ್ಥಿ ಒಳ ಉಡುಪಿನಲ್ಲಿ 5 ಕೆ.ಜಿ ಕಬ್ಬಿಣದ ಕಲ್ಲು!

Spread the love

ಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ಕೆಕೆಆರ್‌ಟಿಸಿ) ಚಾಲಕ ಕಂ ನಿರ್ವಾಹಕ ನೇಮಕಾತಿಯ ದೇಹದಾರ್ಢ್ಯ ಪರೀಕ್ಷೆಯಲ್ಲಿ ನಿಗದಿತ ತೂಕ ತೋರಿಸಲು ಒಳ ಉಡುಪುಗಳಲ್ಲಿ ಕಬ್ಬಿಣದ ಕಲ್ಲು, ಕಬ್ಬಿಣದ ತುಂಡುಗಳು, ಸೈಕಲ್‌ ಚೈನ್‌ ಇರಿಸಿಕೊಂಡ ಬಂದ ಅಭ್ಯರ್ಥಿಗಳನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ.

 

ಕೆಕೆಆರ್‌ಟಿಸಿಯು 1,619 ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ. ಸುಮಾರು 39 ಸಾವಿರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಸಂಸ್ಥೆಯ ಕೇಂದ್ರ ಕಚೇರಿ ಸಮೀಪ ಡಿಸೆಂಬರ್‌ನಿಂದ ದೇಹದಾರ್ಢ್ಯ ಪರೀಕ್ಷೆ ನಡೆಯುತ್ತಿದೆ.

‘ದೇಹದಾರ್ಢ್ಯ ಪರೀಕ್ಷೆಯಲ್ಲಿ ಅಕ್ರಮವಾಗಿ ಪಾಸಾಗಲು ಕಡಿಮೆ ತೂಕದ ಅಭ್ಯರ್ಥಿಯೊಬ್ಬ 5 ಕೆ.ಜಿ.ಯ ಕಬ್ಬಿಣದ ಕಲ್ಲನ್ನು ಒಳುಡುಪಿನಲ್ಲಿ ಇರಿಸಿಕೊಂಡಿದ್ದ. ಮತ್ತೆ ಕೆಲವರು ಕಬ್ಬಿಣ ತುಂಡುಗಳನ್ನು ತೊಡೆಗೆ, ಸೈಕಲ್‌ ಚೈನ್‌ಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಬಂದಿದ್ದರು. ನೋಡಲು ನೀಳಕಾಯದಂತೆ ಇದ್ದು, ನಡಿಗೆಯಲ್ಲಿ ಅನುಮಾನ ಬಂದು ತಪಾಸಣೆ ಮಾಡಿದಾಗ ಸುಮಾರು 5 ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ನೇಮಕಾತಿಯಿಂದ ಅವರನ್ನು ಕಪ್ಪುಪಟ್ಟಿಗೆ ಸೇರಿಸಿ, ಎಚ್ಚರಿಕೆ ನೀಡಿ ಕಳುಹಿಸಲಾಗಿದೆ’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಂ.ರಾಚಪ್ಪ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ