Breaking News

ಸರ್ಕಾರದ ಎಡವಟ್ಟಿನಿಂದ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಭೀತಿ

Spread the love

ಬೆಂಗಳೂರು: ಸರ್ಕಾರದ ಎಡವಟ್ಟಿನಿಂದ ಇದೀಗ ರಾಜ್ಯದಲ್ಲಿ ಕೊರೊನಾ ಸೋಂಕು ಇನ್ನಷ್ಟು ಹೆಚ್ಚುವ ಭೀತಿ ಎದುರಾಗಿದೆ. ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸುವ ಮೂಲಕ ಇದೀಗ ಗ್ರಾಮೀಣ ಪ್ರದೇಶಗಳಲ್ಲೂ ಕೊರೊನಾ ಸೋಂಕು ಹರಡುವ ಸಾಧ್ಯತೆಯಿದೆ.

ಲಾಕ್ ಡೌನ್ ಸಡಿಲಿಕೆಯಿಂದಾಗಿ ಬೆಂಗಳೂರಿನಲ್ಲಿದ್ದ ವಲಸೆ ಕಾರ್ಮಿಕರನ್ನು ಅವರವರ ಊರುಗಳಿಗೆ ತೆರಳಲು ಕೆ ಎಸ್ ಆರ್ ಟಿಸಿಯಿಂದ ಉಚಿತ ಬಸ್ ವ್ಯವಸ್ಥೆ ಮಾಡಿ ಕಳುಹಿಸಲಾಗಿತ್ತು. ಹೀಗೆ ಕಳುಹಿಸುವಾಗ ಕಾರ್ಮಿಕರಿಗೆ ಕಾಟಾಚಾರಕ್ಕೆ ತಪಾಸಣೆ ನಡೆಸಲಾಗಿದೆ ಹೊರತು ಸೂಕ್ತವಾಗಿ ತಪಾಸಣೆ ನಡೆಸುವ ಕೆಲಸ ಮಾಡಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ಸರ್ಕಾರ ಮಾಡಿರುವ ಈ ಎಡವಟ್ಟಿನಿಂದಾಗಿ ಇದೀಗ ಗ್ರಾಮೀಣ ಭಾಗಗಳಲ್ಲೂ ಕೊರೊನಾ ಸೋಂಕು ಹರಡುವ ಸಾಧ್ಯತೆ ಹೆಚ್ಚಿದೆ ಎಂದು ವೈದ್ಯರು ಹಾಗೂ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಮೂರನೇ ಹಂತದ ಲಾಕ್ ಡೌನ್ ನಲ್ಲಿ ಹಲವು ಸಡಿಲಿಕೆ ಮಾಡಲಾಗಿದೆ. ಆದರೆ ಪಾಸ್ ಗಳಲ್ಲಿದೇ ಇರುವವರಿಗೂ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಕಂಟೈನ್ಮೆಂಟ್ ಝೋನ್ ಗಳಲ್ಲೂ ಜನರು ಓಡಾಟ ನಡೆಸಿದ್ದಾರೆ ಇದುಕೂಡ ಸೋಂಕು ಹರಡಲು ಕಾರಣವಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ