Breaking News

ಚುನಾವಣಾ ಪೂರ್ವ ತಯಾರಿ: ರಾಜ್ಯಕ್ಕೆ ಆಯೋಗದ ಹಿರಿಯ ಅಧಿಕಾರಿಗಳ ನೇತೃತ್ವದ ಮೂರು ತಂಡಗಳು ಭೇಟಿ

Spread the love

ಬೆಂಗಳೂರು: ಮುಂಬರುವ ಸಾರ್ವತ್ರಿಕ ಚುನಾವಣೆ ಕರ್ನಾಟಕ ವಿಧಾನಸಭೆ-2023 ರ ಕುರಿತಂತೆ ಜಿಲ್ಲಾಮಟ್ಟದಲ್ಲಿ ನಡೆಯುತ್ತಿರುವ ಪೂರ್ವತಯಾರಿಗಳ ಪರಿಶೀಲನೆಗಾಗಿ ಭಾರತ ಚುನಾವಣಾ ಆಯೋಗದ ಮೂರು ತಂಡಗಳು ರಾಜ್ಯದ ವಿವಿಧ 5 ಕ್ಕೂ ಹೆಚ್ಚು ಜಿಲ್ಲೆಗಳಿಗೆ ನೇರವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

 

ಭಾರತ ಚುನಾವಣಾ ಆಯೋಗದ ಉಪ ಮುಖ್ಯ ಆಯುಕ್ತರಾದ ಅಜಯ್‌ ಬಾಡು ಅವರ ನೇತೃತ್ವದ ತಂಡ ಯಾದಗಿರಿ ಜಿಲ್ಲೆಗೆ ಬೇಟಿ ನೀಡಿ ಇವಿಎಮ್‌ ಮತ್ತು ವಿವಿಪ್ಯಾಟ್‌ ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದರು. ಮತದಾರರ ಜಾಗೃತಿಗಾಗಿ ಸ್ವೀಪ್‌ ಮೂಲಕ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಕಲಬುರಗಿ ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ತಯಾರಿ ಕುರಿತಂತೆ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಮತ್ತು ಅಪರ ಮುಖ್ಯ ಚುನಾವಣಾಧಿಕಾರಿ ರಾಜೇಂದ್ರ ಚೋಳನ್‌ ಅವರು ಭಾಗವಹಿಸಿದ್ದರು.

ಭಾರತ ಚುನಾವಣಾ ಆಯೋಗದ ನಿರ್ದೇಶಕರಾದ ಶ್ರೀಮತಿ ಶುಭ್ರ ಸಕ್ಸೇನಾ ಹಾಗೂ ಕಾರ್ಯದರ್ಶಿ ಬಿ.ಸಿ ಪಾತ್ರ ಅವರ ನೇತೃತ್ವದ ತಂಡ ಚಾಮರಾಜನಗರ ಜಿಲ್ಲೆಗೆ ಬೇಟಿ ನೀಡಿ ಇವಿಎಮ್‌ ಮತ್ತು ವಿವಿಪ್ಯಾಟ್‌ ಗಳ ಪ್ರಾಥಮಿಕ ಹಂತದ ಪರಿಶೀಲನೆ ನಡೆಸಿದರು. ಮತದಾರರ ಜಾಗೃತಿಗಾಗಿ ಸ್ವೀಪ್‌ ಮೂಲಕ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಮೈಸೂರು ವಲಯದ ಜಿಲ್ಲಾಧಿಕಾರಿಗಳೊಂದಿಗೆ ಚುನಾವಣಾ ಪೂರ್ವ ತಯಾರಿ ಕುರಿತಂತೆ ಸಭೆ ನಡೆಸಿದರು. ಈ ತಂಡದ ಜೊತೆಗೆ ರಾಜ್ಯ ಅಪರ ಮುಖ್ಯ ಚುನಾವಣಾಧಿಕಾರಿ ವೆಂಕಟೇಶ್‌ ಕುಮಾರ್ ಅವರು ಭಾಗವಹಿಸಿದ್ದರು.‌


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ