ಬೆಂಗಳೂರು: ಚಿಕ್ಕಬಳ್ಳಾಪುರದ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜನೇಯ ರೆಡ್ಡಿ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ವಿರುದ್ಧದ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿ ದಂತೆ ಜನಪ್ರತಿನಿಧಿಗಳ
ವಿಶೇಷ ನ್ಯಾಯಾಲಯ ಜಾರಿಗೊಳಿಸಿದ್ದ ಸಮನ್ಸ್ ಪ್ರಶ್ನಿಸಿ ಸುಧಾಕರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸುಧಾಕರ್ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ ಹೊಳ್ಳ, ‘ಸಾರ್ವಜನಿಕ ಭಾಷಣದಲ್ಲಿ ಸುಧಾಕರ್ ಆಡಿದ್ದಾರೆ ಎನ್ನಲಾದ ಆಕ್ಷೇಪಾರ್ಹ ಮಾತುಗಳ ಬಗ್ಗೆ ಆಂಜನೇಯ ರೆಡ್ಡಿ ತಪ್ಪು ಕಲ್ಪನೆ ಹೊಂದಿದ್ದಾರೆ. ಭಾಷಣದಲ್ಲಿ ಎಲ್ಲಿಯೂ ಅವರ ಹೆಸರನ್ನು ಸುಧಾಕರ್ ಬಳಸಿಲ್ಲ. ಆದ್ದರಿಂದ, ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿದರು. ಮನವಿ ಮಾನ್ಯ ಮಾಡಿದ ನ್ಯಾಯಪೀಠ, ಪ್ರತಿವಾದಿಗಳಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆ ವಿಚಾರಣೆ ಮುಂದೂಡಿದೆ.
Laxmi News 24×7