Breaking News

ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ, 50 ಸಾವಿರ ರೂ. ಮುಚ್ಚಳಿಕೆ

Spread the love

ಬೆಳಗಾವಿ: ಮರಾಠಿಗರ ಓಲೈಕೆ ರಾಜಕಾರಣಕ್ಕೆ ಬಿದ್ದ ರಾಜ್ಯ ಸರಕಾರ ಕನ್ನಡ ಪರ ಹೋರಾಟಗಾರರಿಗೆ ರೌಡಿ ಶೀಟರ್ ಪಟ್ಟ ನೀಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ಇತ್ತೀಚೆಗೆ ಎಂಇಎಸ್ ಮುಖಂಡ ದೀಪಕ ದಳವಿ ಅವರ ಮುಖಕ್ಕೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಪರ ಹೋರಾಟಗಾರರಾದ ಸಂಪತ್ ಕುಮಾರ್ ದೇಸಾಯಿ ಹಾಗೂ ಅನಿಲ ದಡ್ಡಿಮನಿ ಅವರ ವಿರುದ್ಧ  ಪೊಲೀಸರು ರೌಡಿಶೀಟ್ ತೆರೆದಿದ್ದಾರೆ.

ಇತ್ತೀಚೆಗಷ್ಟೇ ನಡೆದ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಕನ್ನಡಿಗರಿಗೆ ಎಳ್ಳಷ್ಟೂ ಪ್ರಾಶಸ್ತ್ಯ ನೀಡದೆ ಕನ್ನಡಿಗರ ಅಸಮಾಧಾನಕ್ಕೆ ಗುರಿಯಾದ ಬೆನ್ನಲ್ಲೇ ಈ ಬೆಳವಣಿಗೆಯಿಂದ ಬೆಂಕಿಗೆ ತುಪ್ಪ ಸುರಿದಂತಾಗಿದೆ.ಚುನಾವಣೆ ಹಿನ್ನೆಲೆಯಲ್ಲಿ ಎಪಿಎಂಸಿ ಪೊಲೀಸ್ ಠಾಣೆಯಿಂದ ಇಬ್ಬರೂ ಕನ್ನಡ ಪರ ಹೋರಾಟಗಾರರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಿದ್ದು, ಶಾಂತಿಭಂಗ ಮಾಡುವುದಿಲ್ಲ ಎಂದು ತಲಾ 50 ಸಾವಿರ ರೂ. ಮುಚ್ಚಳಿಕೆ ಪಡೆಯುವ ಬಗ್ಗೆ ನೋಟಿಸ್ ನಲ್ಲಿ ನಮೂದಿಸಿದ್ದರಿಂದ ಈ ಬೆಳವಣಿಗೆ ಬೆಳಕಿಗೆ ಬಂದಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ