Breaking News

ರಾಜ್ಯ ಸರಕಾರದ ಭ್ರಷ್ಟಾಚಾರ ಭಾಷಣದಲ್ಲಿ ಸಾಬೀತು: ಸಿದ್ದರಾಮಯ್ಯ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ಯಾವ ಕೆಲಸವನ್ನೂ ಮಾಡದೆ ಕೇವಲ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂಬ ಜನರ ಆರೋಪ ರಾಜ್ಯಪಾಲರ ಭಾಷಣದಿಂದ ಸಾಬೀತಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

 

ರಾಜ್ಯಪಾಲರ ಭಾಷಣ ಕುರಿತು ಹೇಳಿಕೆ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು, ಸರಕಾರವು ರಾಜ್ಯಪಾಲರ ಬಾಯಲ್ಲಿ ಒಂದು ವರ್ಷದ ಸಾಧನೆಗಳ ಬಗ್ಗೆ ಮಾಡಿಸಿರುವ ಭಾಷಣ ಸುಳ್ಳಿನ ಕಂತೆ ಎಂದು ದೂರಿದ್ದಾರೆ.

ರಾಜ್ಯವು ಇಂದು ಮುಖ್ಯವಾಗಿ ನಿರುದ್ಯೋಗ, ಬೆಲೆಯೇರಿಕೆ, ಭ್ರಷ್ಟಾಚಾರ, ಸೌಹಾರ್ದದ ಸಮಸ್ಯೆ, ಅಶಾಂತಿಯ ವಾತಾವರಣ, ಕೃಷಿ ಬಿಕ್ಕಟ್ಟು, ನೇಕಾರರು – ಮೀನುಗಾರರ ಸಮಸ್ಯೆಗಳು ಹಾಗೂ ಸಣ್ಣ ಕೈಗಾರಿಕೆಗಳಿಗೆ ಒತ್ತು ಕೊಡದೆ ಇರುವುದು ಮುಂತಾದ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ. ರಾಜ್ಯಪಾಲರ 82 ಪ್ಯಾರಾಗಳ ಭಾಷಣದಲ್ಲಿ ಈ ಸಮಸ್ಯೆಗಳ ಕುರಿತು ಒಂದೇ ಒಂದು ಮಾತನ್ನೂ ಪ್ರಸ್ತಾವಿಸಿಲ್ಲ ಎಂದು ಟೀಕಿಸಿದ್ದಾರೆ.

ಅಡಿಕೆ, ತೆಂಗು, ಮೆಣಸು ಬೆಳೆಯುವ ಕರಾವಳಿ ಮತ್ತು ಮಲೆನಾಡಿನ ರೈತರು ಹಾಗೂ ರಾಗಿ ಭತ್ತ, ಜೋಳ, ತೊಗರಿ ಮುಂತಾದವುಗಳನ್ನು ಬೆಳೆಯುವ ಉತ್ತರ ಕರ್ನಾಟಕ ಮತ್ತು ಬಯಲು ಸೀಮೆಯ ರೈತರಿಬ್ಬರೂ ಸಂಕಷ್ಟದಲ್ಲಿದ್ದಾರೆ. ಅದರ ಬಗ್ಗೆಯೂ ಪ್ರಸ್ತಾವವಿಲ್ಲ. ಒಟ್ಟಾರೆ ರಾಜ್ಯಪಾಲರ ಭಾಷಣ ತೌಡು ಕುಟ್ಟಿದಂತೆ ಕಾಣಿಸುತ್ತಿದೆ. ಭತ್ತ ಕುಟ್ಟಿದರೆ ಅಕ್ಕಿ ಬರುತ್ತದೆ. ತೌಡು ಕುಟ್ಟಿದರೆ ಬರಿ ಉಬ್ಬಲು ಬರುತ್ತದೆ ಎಂದು ಟೀಕಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ