Breaking News

ಫೆಬ್ರವರಿ ಕೊನೆಯ ವಾರದಲ್ಲಿ ಕಾಂಗ್ರೆಸ್ ಟಿಕೆಟ್ ಘೋಷಣೆ: ಸಿದ್ದರಾಮಯ್ಯ

Spread the love

ವಿಜಯಪುರ: ಫೆಬ್ರವರಿ ಕೊನೆಯ ವಾರದಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಾಗಿ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ಶನಿವಾರ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನಡೆಸಿರುವ ಮೂರು ಸಮೀಕ್ಷೆ ಆಧಾರದಲ್ಲಿ ಗೆಲ್ಲುವ ಶಕ್ತಿ ಇರುವವರಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.

 

150 ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ಗುರಿಯೊಂದಿಗೆ ಸಾಮಾಜಿಕ ನ್ಯಾಯದ ಅಡಿಯಲ್ಲಿ ಟಿಕೆಟ್ ನೀಡಲಾಗುತ್ತದೆ. ಗೆಲ್ಲುವ ಅರ್ಹತೆ ಇರುವ ಹಳೆಯ ನಾಯಕರ ಜೊತೆ ಹೊಸಬರಿಗೂ ಅವಕಾಶ ಕಲ್ಪಿಸಲಾಗುತ್ತದೆ. ಗೆಲ್ಲುವ ಅವಕಾಶ ಇರುವ ಕ್ಷೇತ್ರಗಳಲ್ಲಿ ಅರ್ಹರಿಗೆ ಟಿಕೆಟ್ ನೀಡಲಾಗುತ್ತದೆ. ಹೀಗಾಗಿ ಅಲ್ಪ‌ಸಂಖ್ಯಾತರಿಗೆ ಕೊಡಬೇಕು, ಹಿಂದುಳಿದವರಿಗೆ ಕೊಡಬೇಕು ಎನ್ನುವುದೇನಿಲ್ಲ. ಗೆಲ್ಲುವ ಅವಕಾಶ ಇರುವ ಕಡೆಗಳಲ್ಲಿ ಎಲ್ಲ ಸಮುದಾಯಕ್ಕೂ ಆದ್ಯತೆ ನೀಡಲಾಗುತ್ತದೆ ಎಂದರು.

 

ಪರಿಶಿಷ್ಟ ಜಾತಿ ಪಂಗಡಗಳ ಸಮುದಾಯಕ್ಕೆ 51 ಕ್ಷೇತ್ರಗಳು ಮೀಸಲಿವೆ. ಅಲ್ಲಿಯೂ ಗೆಲ್ಲುವ ಸಾಮರ್ಥ್ಯ ಇರುವ ಅಭ್ಯರ್ಥಿಗಳನ್ನು ಕಣಕ್ಕಿಸಲಾಗುತ್ತದೆ ಎಂದರು.

ಯವಕರು, ಅನುಭವಿ ಹಿರಿಯರಿಗೂ ಟಿಕೆಟ್ ನೀಡಲಾಗುತ್ತದೆ. 150 ಸ್ಥಾನ ಗೆಲ್ಲುವುದು ನಮ್ಮ ಮುಂದಿರುವ ಗುರಿ. ಹೀಗಾಗಿ ಗೆಲುವಿಗೆ ನಮ್ಮ ಆದ್ಯತೆ ನೀಡಿ ಟಿಕೆಟ್ ಹಂಚಿಕೆ ಮಾಡುತ್ತೇವೆ ಎಂದರು.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ