Breaking News

ಪ್ರಧಾನಿ ಮೋದಿಯವರಿಗೆ ದುರಹಂಕಾರವಿದೆ:ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ.ಖರ್ಗೆ

Spread the love

ವದೆಹಲಿ : ಕೇಂದ್ರದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ದೇಶದಲ್ಲಿ ವಾಕ್ ಸ್ವಾತಂತ್ರ್ಯವಿಲ್ಲ ಎಂದು ಶನಿವಾರ ಆರೋಪಿಸಿದ್ದಾರೆ.

ಜಾರ್ಖಂಡ್‌ನ ಸಾಹೇಬ್‌ಗಂಜ್ ಜಿಲ್ಲೆಯಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಖರ್ಗೆ, ಸಂಸತ್ತಿನಲ್ಲಿ ಮಾಡಿದ ಭಾಷಣದ ಭಾಗಗಳನ್ನು ತೆಗೆದುಹಾಕಲಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

 

”ಸಂಸತ್ತಿನ ಒಳಗೆ ಅಥವಾ ಹೊರಗೆ ವಾಕ್ ಸ್ವಾತಂತ್ರ್ಯವಿಲ್ಲ. ಯಾರಾದರೂ ಸತ್ಯವನ್ನು ಮಾತನಾಡಿದರೆ, ಅದರ ಬಗ್ಗೆ ಬರೆದರೆ, ತೋರಿಸಿದವರನ್ನು ಬಿಜೆಪಿಯವರು ಕಂಬಿ ಹಿಂದೆ ಕಳುಹಿಸುತ್ತಾರೆ “ಎಂದು ಆರೋಪಿಸಿದರು.

ಪ್ರಧಾನಿ ಮೋದಿಯವರಿಗೆ ದುರಹಂಕಾರವಿದೆ

ತೀವ್ರ ವಾಗ್ದಾಳಿ ನಡೆಸಿ ಪ್ರಧಾನಿ ಮೋದಿಯವರಲ್ಲಿ ದುರಹಂಕಾರ ಬಂದಿದೆ, ಆದರೆ ಯಾರ ಅಹಂಕಾರವೂ ಉಳಿಯುವುದಿಲ್ಲ. ದೇಶದಲ್ಲಿ ಹಣದುಬ್ಬರ ನಿರಂತರವಾಗಿ ಹೆಚ್ಚುತ್ತಿದೆ. 2014ರಲ್ಲಿ ಮೋದಿಯವರು ನನ್ನ ಸರಕಾರ ಬಂದ ಮೇಲೆ ಹಣದುಬ್ಬರ ತಗ್ಗಿಸುತ್ತೇನೆ ಎಂದು ಹೇಳುತ್ತಿದ್ದರು. ನಾನು ಪ್ರಧಾನಿ ಮೋದಿಯವರನ್ನು ಕೇಳುತ್ತೇನೆ, ನೀವು ಈಗ ಎಲ್ಲಿದ್ದೀರಿ ಎಂದು ಪ್ರಶ್ನಿಸಿದರು.


Spread the love

About Laxminews 24x7

Check Also

ಸರ್ಕಾರ ಸಲ್ಲಿಸಿರುವ ಅರ್ಜಿ ವಿಲೇವಾರಿವರೆಗೂ ಸಿಎಟಿ ಆದೇಶ ಜಾರಿಗೆ ಒತ್ತಾಯಿಸದಂತೆ ವಿಕಾಸ್ ಕುಮಾರ್​ಗೆ ಸೂಚನೆ

Spread the loveಬೆಂಗಳೂರು: ಆರ್​​ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದ ಆರೋಪದಡಿ ಕೆಲವು ಅಧಿಕಾರಿಗಳನ್ನು ಅಮಾನತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ