Breaking News

JDS ಶಾಸಕರು ಕಾಂಗ್ರೆಸ್ ಸೇರುವುದು ಖಚಿತ

Spread the love

ರಾಯಚೂರು: ಜೆಡಿಎಸ್ ಶಾಸಕ ಶಿವಲಿಂಗೇಗೌಡರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದು, ನೂರಕ್ಕೆ ನೂರರಷ್ಟು ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಅರಸಿಕೆರೆ ಜೆಡಿಎಸ್ ಶಾಸಕ ಶಿವಲಿಂಗೇಗೌಡರು 100 ಪರ್ಸೆಂಟ್ ಕಾಂಗ್ರೆಸ್ ಗೆ ಬರ್ತಾರೆ. ಯಾಕೆ ಅನುಮಾನಾನಾ? ಎಂದು ಪ್ರಶ್ನಿಸಿದ್ದಾರೆ.

ವಿಧಾನಮಂಡಲ ಅಧಿವೇಶನ ಮುಗಿದ ಮೇಲೆ ಯಾವತ್ತು ಬೇಕಾದರೂ ಅವರು ಕಾಂಗ್ರೆಸ್ ಗೆ ಬರುತ್ತಾರೆ ಎಂದು ತಿಳಿಸಿದ್ದಾರೆ.

ಅರಸಿಕೆರೆ ಜೆಡಿಎಸ್ ಶಾಸಕರಾಗಿರುವ ಶಿವಲಿಂಗೇಗೌಡರಿಗೆ ಸೆಡ್ಡು ಹೊಡೆದು ಹೊಸ ಅಭ್ಯರ್ಥಿಯನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದರು. ಅರಸಿಕೆರೆ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ ಈಬಾರಿ ಅರಸಿಕೆರೆ ಜೆಡಿಎಸ್ ಅಭ್ಯರ್ಥಿಯಾಗಿ ಬಾಣಾವರ ಅಶೋಕ್ ಅವರನ್ನು ಕಣಕ್ಕಿಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಬೆಳವಣಿಗೆ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಶಿವಲಿಂಗೆಗೌಡರು ನೂರಕ್ಕೆ ನೂರರಷ್ಟು ಕಾಂಗ್ರೆಸ್ ಗೆ ಬರುತ್ತಾರೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ