Breaking News

(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಆರಂಭ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

Spread the love

ಬೆಳಗಾವಿ : ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಗೆ ಹಂಚಿಕೆಯಾಗಿರುವ ಎಲೆಕ್ಟ್ರಾನಿಕ್ ಮತಯಂತ್ರಗಳ(ಇವಿಎಂ) ಪ್ರಥಮ ಹಂತದ ಪರಿಶೀಲನಾಕಾರ್ಯ ಭಾರತ ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

ಇಲ್ಲಿನ ಹಿಂಡಲಗಾ ಗ್ರಾಮದಲ್ಲಿರುವ ಭಾರತ ಚುನಾವಣಾ ಆಯೋಗದ ಮತಯಂತ್ರಗಳ ಉಗ್ರಾಣದಲ್ಲಿ ಸೋಮವಾರ(ಫೆ.13) ಆರಂಭಿಸಲಾಗಿರುವ ಪ್ರಥಮ ಹಂತದ ಪರಿಶೀಲನಾ(ಎಫ್.ಎಲ್‌.ಸಿ)ಕಾರ್ಯವನ್ನು ವೀಕ್ಷಿಸಿದ ಬಳಿಕ ಈ ವಿಷಯ ತಿಳಿಸಿದರು.

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಳಕೆಗಾಗಿ ಜಿಲ್ಲೆಗೆ ನೀಡಲಾಗಿರುವ ಮತಯಂತ್ರಗಳನ್ನು ಕೂಲಂಕುಷವಾಗಿ ಪರಿಶೀಲಿಸಿದ ಬಳಿಕವೇ ಅವುಗಳನ್ನು ಬಳಕೆಗೆ ಖಾತ್ರಿಪಡಿಸಲಾಗುತ್ತದೆ.

ಜಿಲ್ಲೆಯ ಒಟ್ಟು 18 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಒಟ್ಟಾರೆ 8748 ಬ್ಯಾಲೆಟ್ ಯುನಿಟ್; 7216 ಕಂಟ್ರೋಲ್ ಯುನಿಟ್ ಹಾಗೂ 6319 ವಿವಿಪ್ಯಾಟ್ ಯಂತ್ರಗಳನ್ನು ಒದಗಿಸಲಾಗಿರುತ್ತದೆ ಎಂದು ತಿಳಿಸಿದರು


Spread the love

About Laxminews 24x7

Check Also

ಬಿ.ಸಿ.ನಾಗೇಶ್ ಅಗಲಿಕೆಗೆ ಸಚಿವ ಪ್ರಹ್ಲಾದ್ ಜೋಶಿ ಕಂಬನಿ

Spread the loveಬೆಂಗಳೂರು: ಸರಳ-ಸಜ್ಜನ, ಸ್ನೇಹಮಯಿ ಆಗಿದ್ದ ಮಾಜಿ ಶಿಕ್ಷಣ ಸಚಿವ, ತಿಪಟೂರು ಮಾಜಿ ಶಾಸಕ ಬಿ.ಸಿ.ನಾಗೇಶ್ ಅವರ ನಿಧನಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ