Breaking News

ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ

Spread the love

ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು ಶ್ಲಾಘನಾರ್ಹ ಎಂದಿದ್ದಾರೆ.

ಉತ್ತರ ಕರ್ನಾಟಕವನ್ನು ‘ಕಿತ್ತೂರು ಕರ್ನಾಟಕ’ ಎಂದು ಘೋಷಿಸುವುದರಿಂದಿಗೆ ಮುಖ್ಯಮಂತ್ರಿಗಳು ಈ ಭಾಗದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಸಮಾಧಾನಕರವಾಗಿವೆ. ಆದರೆ ಕಿತ್ತೂರ ಕರ್ನಾಟಕದ ಪರಿಪೂರ್ಣ ಅಭಿವೃದ್ಧಿಗೆ ಸರಕಾರದ ಕೊಡುಗೆ ಸಾಲದು. ಬರುವ ಬಜೆಟ್ ನಲ್ಲಿ ಹಲವಾರು ವರ್ಷಗಳಿಂದ ನನೆಗುದ್ದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸುವತ್ತ ಬೊಮ್ಮಾಯಿ ಸರಕಾರ ಗಮನ ಹರಿಸಬೇಕು. ಅಲ್ಲದೆ, ಬರುವ ಬಜೆಟ್ ನಲ್ಲಿ ಕಿತ್ತೂರು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಗೆ ಹಳೆಯ ಯೋಜನೆಗಳ ಜೊತೆಗೆ ಹೊಸ ಯೋಜನೆಗಳನ್ನು ಘೋಷಿಸುವ ಕೆಲಸವಾಗಬೇಕು ಎಂದು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ