Breaking News

ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

Spread the love

ಬೆಳಗಾವಿ: ಹಿಡಕಲ್ ಡ್ಯಾಂ ಭೂ ಸ್ವಾಧೀನಾಧಿಕಾರಿ ರೇಷ್ಮಾ ತಾಳಿಕೋಟಿ ಅವರ ಪತಿ ಜಾಫರ್ ಫಿರ್ಜಾದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 40 ವರ್ಷ ವಯಸ್ಸಾಗಿತ್ತು.

ರೇಷ್ಮಾ ತಾಳಿಕೋಟೆ ಬೆಂಗಳೂರಿಗೆ ತೆರಳಿದ್ದ ಸಂದರ್ಭದಲ್ಲಿ ಬಳಗಾವಿಯ ಆಜಂ ನಗರದ ಮನೆಯಲ್ಲೇ ನೇಣು ಹಾಕಿಕೊಂಡು ಅವರು ಸೋಮವಾರ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕೆಎಎಸ್ ಅಧಿಕಾರಿಯಾಗಿರುವ ರೇಷ್ಮಾ ತಾಳಿಕೋಟೆ ಹುಕ್ಕೇರಿ, ಖಾನಾಪುರ ಸೇರಿದಂತೆ ವಿವಿಧೆಡೆ ತಹಸಿಲ್ದಾರರಾಗಿ ಕಾರ್ಯನಿರ್ವಹಿಸಿದ್ದರು. ಪತಿ ಜಾಫರ್ ಜಿಲ್ಲಾ ತರಬೇತಿ ಕೇಂದ್ರದಲ್ಲಿ  ಎಫ್ ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ತಮ್ಮ ಸಹೋದರ ಆಸಿಫ್ ಅವರ ಆಜಂ ನಗರದ ಮನೆಗೆ ತೆರಳಿ ಅಲ್ಲಿಯೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಾಫರ್ ಕಳೆದ ಕೆಲವು ತಿಂಗಳಿನಿಂದ ಡಿಪ್ರೆಶನ್ ಗೆ ಒಳಗಾಗಿದ್ದರು ಎನ್ನುವ ಮಾಹಿತಿ ಇದ್ದು ತನಿಖೆ ನಡೆಸಲಾಗುತ್ತಿದೆ ಎಂದು ಡಿಸಿಪಿ ಶೇಖರ್ ಅವರು ಪ್ರತಿವಾಹಿನಿಗೆ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ: ಇಂದಿನಿಂದ ಕೆಎಸ್‌ಎನ್ ಗೀತೆಗಳ ಗಾಯನ ತರಬೇತಿ

Spread the love‌ಬೆಳಗಾವಿ: ‘ಇಲ್ಲಿನ ಕುಮಾರ ಗಂಧರ್ವ ರಂಗಮಂದಿರದಲ್ಲಿ ‘ಕೆ.ಎಸ್‌.ನರಸಿಂಹಸ್ವಾಮಿ ನೆನಪಿನ ವಸಂತೋತ್ಸವ’ ‍ಪ್ರಯುಕ್ತ, ಮಾರ್ಚ್‌ 10, 11ರಂದು ಕೆ.ಎಸ್.ನರಸಿಂಹಸ್ವಾಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ