Breaking News

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಜೈಲುಶಿಕ್ಷೆ

Spread the love

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ಕುಮಾರಸ್ವಾಮಿಗೆ ಜೈಲು ಶಿಕ್ಷೆ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನಯಯಾಲಯ ಆದೇಶ ಹೊರಡಿಸಿದೆ.

ಮೂಡಿಗೆರೆ ಶಾಸಕ ಎಂ.ಪಿ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ 1,38,65,000 ರೂಪಾಯಿ ಹಣ ನೀಡಬೇಕಿತ್ತು. ಆದರೆ ಹಣ ಕೊಡದೇ ಸಮಸ್ಯೆ ಮಾಡಿದ್ದರು. ಇದರಿಂದ ಬೇಸತ್ತ ಹೂವಪ್ಪ ಗೌಡ ಕೋರ್ಟ್ ಮೆಟ್ಟಿಲೇರಿದ್ದರು.

ಪ್ರಕರಣ ಸಂಬಂಧ ಕೋರ್ಟ್, ಶಾಸಕ ಎಂ.ಪಿ ಕುಮಾರಸ್ವಾಮಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. ಶಾಸಕರ ವಿರುದ್ಧ ದಾಖಲಾಗಿದ್ದ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಶಿಕ್ಷೆ ಪ್ರಕಟವಾಗಿದೆ. ತಕ್ಷಣ ಸಾಲದ ಹಣ ಪಾವತಿ ಮಾಡಬೇಕು ಇಲ್ಲವಾದಲ್ಲಿ 4 ವರ್ಷ ಜೈಲುಶಿಕ್ಷೆ ಅನುಭವಿಸಬೇಕಾಗುತ್ತದೆ.


Spread the love

About Laxminews 24x7

Check Also

ಮೈಸೂರಿನಿಂದ ಉದಯಪುರಕ್ಕೆ ತೆರಳುತ್ತಿದ್ದ ರೈಲಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗಿತ್ತು.

Spread the loveರಾಮನಗರ: ಬೊಂಬೆನಗರಿ ಚನ್ನಪಟ್ಟಣದ ಬಳಿ ಚಲಿಸುತ್ತಿದ್ದ ರೈಲಿನ ಇಂಜಿನ್​​ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಇಂದು (ಗುರುವಾರ) ನಡೆದಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ