ಬೆಂಗಳೂರು:ಜೈನ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ.
ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು.ವಿದ್ಯಾರ್ಥಿಗಳೆಲ್ಲ ಬಿಬಿಎ 5 ನೇ ಸೆಮಿಸ್ಟರ್ನಲ್ಲಿ ಓದುತ್ತಿದ್ದಾರೆ ಎಂದು ತಿಳಿದುಬಂದಿದೆ.
ಫೆಬ್ರವರಿ 8ರಂದು ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ಜಾತಿ ವ್ಯವಸ್ಥೆಯನ್ನ ಖಂಡಿಸುವ ಸಂದೇಶ ನೀಡುವ ಭರದಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಅಲ್ಲ, ಬಿಯರ್ ಅಂಬೇಡ್ಕರ್. ಡೋಂಟ್ ಟಚ್ ಮಿ, ಟಚ್ ಮಿ ಅಂತ ಹಾಡು ಹಾಕಿ ಅವಮಾನ ಮಾಡಿದ್ದಾರೆಂದು ಆರೋಪಿಸಲಾಗುತ್ತಿದೆ. ನೀವು ಡಿ-ಲಿಟ್ ಆಗಿರುವಾಗ ದಲಿತರಾಗಿರಲು ಕಾರಣವೇನು ಎಂದು ವಿವಾದಾತ್ಮಕ ಸ್ಕಿಟ್ ಪ್ರದರ್ಶನ ಮಾಡಲಾಗಿದೆ.
Laxmi News 24×7