Breaking News

ಪಿಡಿಒ ಹುದ್ದೆಗಳ ಭರ್ತಿಗೆ ಗ್ರೀನ್‌ ಸಿಗ್ನಲ್ ನೀಡಿದ ರಾಜ್ಯ ಸರಕಾರ

Spread the love

ರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ (PDO Recruitment 2023 ) ಖಾಲಿ ಇರುವ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್‌ 1, ಗ್ರೇಡ್‌ 2 ಹುದ್ದೆಗಳನ್ನು 3 ರಿಂದ 4 ತಿಂಗಳೊಳಗೆ ಭರ್ತಿ ಮಾಡುವ ಎಲ್ಲಾ ಸಾಧ್ಯತೆ ಇದೆ.

ಈ ಕುರಿತು ನೇಮಕಾತಿ ಶೀಘ್ರದಲ್ಲಿ ನಡೆಸಲಾಗುವುದು ಎಂದು ವಿಧಾನ ಪರಿಷತ್‌ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ರಾಜ್ಯದ ಗ್ರಾಮ ಪಂಚಾಯತ್‌ ನೇಮಕಾತಿಯ ಸಂಪೂರ್ಣ ವಿವರ :

ಇಲಾಖೆ ಹೆಸರು : ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತಿ (PDO)
ಹುದ್ದೆಗಳ ಹೆಸರು : ಅಭಿವೃದ್ಧಿ ಅಧಿಕಾರಿ, ದ್ವಿತೀಯ ದರ್ಜೆ ಸಹಾಯಕರು, ಗ್ರೇಡ್‌ 1, ಗ್ರೇಡ್‌ 2
ಒಟ್ಟು ಹುದ್ದೆಗಳು : 2000 ಕ್ಕೂ ಅಧಿಕ
ಅರ್ಜಿ ಸಲ್ಲಿಸುವ ವಿಧಾನ : ಶೀಘ್ರದಲ್ಲೇ ತಿಳಿಸುತ್ತೇವೆ

ವಿದ್ಯಾರ್ಹತೆ ವಿವರ :

  • ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಲ್ಲಿ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.
  • ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.
  • ಕಾರ್ಯದರ್ಶಿ ಗ್ರೇಡ್‌ 1 : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.
  • ಕಾರ್ಯದರ್ಶಿ ಗ್ರೇಡ್‌ 2 : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿಯಲ್ಲಿ ದ್ವಿತೀಯ ಪಿಯುಸಿಯಲ್ಲಿ ಪಾಸ್‌ ಆಗಿರಬೇಕು.

ಆಯ್ಕೆ ವಿಧಾನ :
ಕರ್ನಾಟಕ ರಾಜ್ಯದ ಗ್ರಾಮ ಪಂಚಾಯತ್‌ಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ನಡೆಸುವ ಎಲ್ಲಾ ಹುದ್ದೆಗಳಿಗೂ ಸಹ ಕಡ್ಡಾಯವಾಗಿ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ ಇರುತ್ತದೆ.

ಆರ್ಥಿಕ ಇಲಾಖೆ ಮುಂದೆ ಪ್ರಸ್ತಾವನೆ :
ಗ್ರಾಮ ಪಂಚಾಯಿತಿಗಳಿಗೆ 30ಕ್ಕೂ ಹೆಚ್ಚು ಇಲಾಖೆಗಳ ಸೇವೆ ಒದಗಿಸುವ ಅಧಿಕಾರ ನೀಡಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 326 ಹುದ್ದೆಗಳ ಭರ್ತಿಗೆ ಅನುಮತಿ ಕೋರಿದ ಪ್ರಸ್ತಾವನೆ ಆರ್ಥಿಕ ಇಲಾಖೆ ಮುಂದಿದೆ ಎಂದು ಸಿಎಂ ಬಸವರಾಜ್‌ ಬೊಮ್ಮಾಯಿ ತಿಳಿಸಿದ್ದಾರೆ.

ಕಾರ್ಯದರ್ಶಿ ಹುದ್ದೆಗಳ ವಿವರ :
487 ಕಾರ್ಯದರ್ಶಿ ಗ್ರೇಡ್‌ 1 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಹಾಗೂ ಬಡ್ತಿ ಮೂಲಕ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತದೆ.
556 ಕಾರ್ಯದರ್ಶಿ ಗ್ರೇಡ್‌ 2 ಹುದ್ದೆಗಳು ಖಾಲಿ ಇವೆ. ಈ ಪೈಕಿ 343 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲಾಗುತ್ತದೆ. ಉಳಿದ ಹುದ್ದೆಗಳನ್ನು ಹಾಲಿ ಸಿಬ್ಬಂದಿಗೆ ಬಡತಿ ನೀಡಿ ತುಂಬಲಾಗುವುದು ಎಂದು ಸಿಎಂ ಭರವಸೆ ನೀಡಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ